ಟೆನಿಸ್ ತಾರೆ ಸಾನಿಯಾ ಮಿರ್ಜಾ ಅಮ್ಮನಾಗಿದ್ದಾರೆ. ಈ ಸಿಹಿ ಸುದ್ದಿಯನ್ನು ಅವ್ರ ಪತಿ, ಪಾಕ್ ಕ್ರಿಕೆಟಿಗ ಶೋಯಬ್ ಮಲ್ಲಿಕ್ ಟ್ವಿಟರ್ ನಲ್ಲಿ ಹಂಚ್ಕೊಂಡಿದ್ದಾರೆ. ಸಾನಿಯಾ ಗಂಡು ಮಗುವಿಗೆ ಜನ್ಮ ನೀಡಿದ್ದು, ಶೋಯಬ್ ಮಲ್ಲಿಕ್ ಈ ವಿಷ್ಯವನ್ನು ತಿಳಿಸಿದ್ದಾರೆ. ‘ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ನಿಮ್ಮೆಲ್ಲರ ಶುಭಹಾರೈಕೆ ಸದಾ ಹೀಗೆ ಇರಲಿ, ಧನ್ಯವಾದಗಳು’ ಅಂತ ಮಲ್ಲಿಕ್ ಟ್ವೀಟ್ ನಲ್ಲಿ ಹೇಳಿದ್ದಾರೆ. ಸಾನಿಯಾ ಮಿರ್ಜಾ ಮತ್ತು ಮಲ್ಲಿಕ್ 2010ರಲ್ಲಿ ದಾಂಪತ್ಯಕ್ಕೆ ಕಾಲಿಟ್ಟಿದ್ದರು.