Wednesday, September 18, 2024

ಕನ್ನಡದಲ್ಲೇ ರಾಜ್ಯೋತ್ಸವ ಶುಭಾಶಯ ಕೋರಿದ ರಾಷ್ಟ್ರಪತಿ, ಪ್ರಧಾನಿ

ಇಂದು 63ನೇ ಕನ್ನಡ ರಾಜ್ಯೋತ್ಸವ ಸಂಭ್ರಮ. ರಾಜ್ಯದ ಎಲ್ಲಾ ಕಡೆಗಳಲ್ಲೂ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ರಾಜ್ಯೋತ್ಸವಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ.
ಕರ್ನಾಟಕ ರಾಜ್ಯೋತ್ಸವದ ಈ ದಿನದಂದು, ಕರ್ನಾಟಕದ ಜನತೆಗೆ ಹಾರ್ದಿಕ ಅಭಿನಂದನೆಗಳು ಹಾಗೂ ಶುಭಾಶಯಗಳು. ಮುಂಬರುವ ವರ್ಷಗಳಲ್ಲಿ, ಕರ್ನಾಟಕ ರಾಜ್ಯ ಹಾಗೂ ನಮ್ಮ ದೇಶವು ಇನ್ನೂ ಉನ್ನತ ಮಟ್ಟಕ್ಕೇರಲಿ ಅಂತ ರಾಮನಾಥ್ ಕೋವಿಂದ್ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.

ಅದೇರೀತಿ ಪ್ರಧಾನಿ ನರೇಂದ್ರ ಮೋದಿ ಅವರರು, “ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಶುಭಾಶಯಗಳು. ಕರ್ನಾಟಕ ಶ್ರೀಮಂತ ಇತಿಹಾಸ ಹೊಂದಿದ್ದು, ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಪ್ರತಿಭಾವಂತರಿಗೆ ನೆಲೆಯಾಗಿದೆ. ನಾನು ರಾಜ್ಯದ ಜನರ ಸಂತೋಷ ಹಾಗೂ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ” ಅಂತ ಟ್ವೀಟ್ ಮಾಡಿದ್ದಾರೆ.

RELATED ARTICLES

Related Articles

TRENDING ARTICLES