ಖ್ಯಾತ ಗಾಯಕಿ ವಸುಂಧರಾ ದಾಸ್ ಗೆ ಕ್ಯಾಬ್ ಚಾಲಕ ಕಿರುಕುಳ ನೀಡಿರೋ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರಿನ ಮಲ್ಲೇಶ್ವರಂನ ಮಾರ್ಗೋಸಾ ರಸ್ತೆಯಲ್ಲಿ ಅಕ್ಟೋಬರ್ 29 ರಂದು ಸಂಜೆ 4.30ರ ಸುಮಾರಿಗೆ ಈ ಘಟನೆ ನಡೆದಿದೆ ಅಂತ ಹೇಳಲಾಗುತ್ತಿದೆ.
ಅನಾಮಿಕ ಕ್ಯಾಬ್ ಡ್ರೈವರ್ ಭಾಷ್ಯಂ ಸರ್ಕಲ್ ಸಿಗ್ನಲ್ ನಿಂದ ಹಿಂಬಾಲಿಸಿಕೊಂಡು ಬಂದು, ಮಲ್ಲೇಶ್ವರಂನ 18ನೇ ಕ್ರಾಸ್ ಬಳಿ ಕಾರು ಅಡ್ಡಗಟ್ಟಿ ಕಿರುಕುಳ ನೀಡಿದ್ದಾನಂತೆ.
ಕಾರಿನಿಂದ ಇಳಿದು ವಸುಂಧರಾ ದಾಸ್ ಅವರ ಕಾರಿನ ಡೋರ್ ತೆಗೆಯೋ ಪ್ರಯತ್ನ ಮಾಡಿ, ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ ಅಂತ ತಿಳಿದುಬಂದಿದ್ದು, ವಸುಂಧರಾ ದಾಸ್ ಮಲ್ಲೇಶ್ವರಂ ಸ್ಟೇಷನ್ ನಲ್ಲಿ ದೂರು ನೀಡಿದ್ದಾರೆ. ಐಪಿಸಿ ಸೆಕ್ಷನ್ 509, 341, 354 ಮತ್ತು 504ರ ಅಡಿ ಪ್ರಕರಣ ದಾಖಲಾಗಿದೆ.