Wednesday, September 11, 2024

ದರ್ಶನ್ ಕಾರು ಅಪಘಾತ ಪ್ರಕರಣ : ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

ಮೈಸೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮಕ್ಕೆ ಪೊಲೀಸರು ಮನವಿ ಮಾಡಿದ್ದಾರೆ.
ಕಳೆದ ಸೆಪ್ಟೆಂಬರ್ 23ರಂದು ಮೈಸೂರು ರಿಂಗ್‌ರಸ್ತೆಯ ಜಂಕ್ಷನ್‌ ಬಳಿ ದರ್ಶನ್‌ ಕಾರು ಅಪಘಾತಕ್ಕಿಡಾಗಿತ್ತು. ಈ ಅಪಘಾತದ ಮಾಹಿತಿಯನ್ನು ಪೊಲೀಸರು ಚಾರ್ಜ್‌ಶೀಟ್‌ ಮೂಲಕ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಆ ಕಾರನ್ನು ದರ್ಶನ್ ಸ್ನೇಹಿತ ಆಂಟೋನಿ ರಾಯ್‌ ಚಾಲನೆ ಮಾಡುತ್ತಿದ್ದರು. ಅಂಟೋನಿ ರಾಯ್ ಅವರ ನಿರ್ಲಕ್ಷ್ಯತನದಿಂದ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿತ್ತು. ಕಾರಿನಲ್ಲಿದ್ದ ಐವರು ಗಾಯಗೊಂಡು ಚಿಕಿತ್ಸೆ ಪಡೆದಿದ್ದರು. ದರ್ಶನ್‌ರಿಗೆ ಸಹಾಯ ಮಾಡಲು ಬಂದ ವ್ಯಕ್ತಿಯೊಬ್ಬರು ಆಯತಪ್ಪಿ ಬಿದ್ದು ಅವರಿಗೂ ಗಾಯಗಳಾಗಿತ್ತು. ಅವರೂ ಸಹ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಕಾರನ್ನು ಸರ್ಕಾರಿ ಆರ್‌ಟಿಓ ಅಧಿಕಾರಿಗಳು ಪರಿಶೀಲಿಸಿ ಯಾವುದೇ ತಾಂತ್ರಿಕ ಕಾರಣದಿಂದ ಅಪಘಾತ ಆಗಿಲ್ಲ ಅಂತ ವರದಿ ನೀಡಿದ್ದರು.
ಘಟನೆ ಸಂಬಂಧ ನಟರಾದ ದರ್ಶನ್‌, ದೇವರಾಜ್‌, ಪ್ರಜ್ವಲ್‌ದೇವರಾಜ್‌ ಚಾಲಕ ಆಂಟೋನಿ ರಾಯ್ ಹಾಗೂ ಕಾರಿನಲ್ಲಿದ್ದ ಪ್ರಕಾಶ್‌ ಎಂಬುವವರ ಹೇಳಿಕೆಗಳನ್ನು ಪಡೆಯಲಾಗಿತ್ತು. ಎಲ್ಲರೂ ಆಂಟೋನಿ ರಾಯ್ ರವರ ನಿರ್ಲಕ್ಷ್ಯತನವೇ ಅಪಘಾತಕ್ಕೆ ಕಾರಣವೆಂಬ ಸಹಜ ಅಭಿಪ್ರಾಯ ಕೊಟ್ಟಿದ್ದರು. ತಪ್ಪಿತಸ್ಥ ಡ್ರೈವರ್ ಆಂಟೋನಿ ರಾಯ್‌ ವಿರುದ್ದ ಕಾನೂನಿನ ಪ್ರಕಾರ ಶಿಕ್ಷೆ ವಿಧಿಸಬೇಕು ಅಂತ ಮೈಸೂರಿನ ವಿ.ವಿ.ಪುರಂ ಸಂಚಾರಿ ಠಾಣೆ ಪೊಲೀಸರು ಮನವಿ ಮಾಡಿದ್ದಾರೆ.

RELATED ARTICLES

Related Articles

TRENDING ARTICLES