ಮಾಜಿ ಶಾಸಕ ಎಂ.ಪಿ ರವೀಂದ್ರ ವಿಧಿವಶರಾಗಿದ್ದಾರೆ. ಬಹು ಅಂಗಾಂಗ ವೈಪಲ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗಿನ ಜಾವ 3.30ರ ಸುಮಾರಿಗೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಮಾಜಿ ಉಪ ಮುಖ್ಯಮಂತ್ರಿ ಎಂ.ಪಿ ಪ್ರಕಾಶ್ ಅವರ ಪುತ್ರರಾಗಿದ್ದ ರವೀಂದ್ರ ಅವರು ದಾವಣಗೆರೆ ಹರಪನಹಳ್ಳಿ ಕ್ಷೇತ್ರದಿಂದ ಶಾಸಕರಾಗಿದ್ದರು.
ಭಾನುವಾರ ಬೆಳಗ್ಗೆ 12 ಗಂಟೆಗೆ ಹೂವಿನ ಹಡಗಲಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.