ಪ್ರಧಾನಿ ನರೇಂದ್ರ ಮೋದಿ ಅಗಲಿದ ಕೇಂದ್ರ ಸಚಿವ ಅನಂತ ಕುಮಾರ್ ಅವರ ಅಂತಿಮ ದರ್ಶನ ಪಡೆದಿದ್ದಾರೆ.
ಹೆಚ್ ಎಎಲ್ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಬಸವನಗುಡಿಯಲ್ಲಿರುವ ಅನಂತ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ ಮೋದಿ ಸ್ನೇಹಿತ, ಸಹೋದ್ಯೋಗಿಗೆ ಅಂತಿಮ ನಮನ ಸಲ್ಲಿಸಿದ್ರು. ಮೋದಿ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ರಾಜ್ಯಪಾಲ ವಜುಭಾಯ್ ವಾಲ ಉಪಸ್ಥಿತರಿದ್ದರು.