ಕೇಂದ್ರ ಸಚಿವ ಅನಂತ ಕುಮಾರ್ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕರು ಸಂತಾಪ ಸೂಚಿಸುತ್ತಿದ್ದಾರೆ. ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ, ‘ಕೇಂದ್ರ ಸಚಿವ ಅನಂತ್ ಜೀ ಅವ್ರು ಇಂದು ಬೆಳಗ್ಗೆ ಬೆಂಗಳೂರಲ್ಲಿ ನಿಧನರಾಗಿರುವ ಸುದ್ದಿ ಕೇಳಿ ನಾನು ವಿಷಾಧಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಅಂತ ರಾಹುಲ್ ಟ್ವೀಟ್ ಮಾಡಿದ್ದಾರೆ.
ಅನಂತ ಕುಮಾರ್ ಅವರು ತಮ್ಮ ತಲೆಮಾರಿನ ಅತ್ಯುತ್ತಮ ರಾಜಕಾರಣಿಗಳಲ್ಲಿ ಒಬ್ಬರು. ಇವರ ಜ್ಞಾನ, ಅನುಭವ ದೊಡ್ಡದು ಅಂತ ಡಿಸಿಎಂ ಡಾ.ಜಿ ಪರಮೇಶ್ವರ್ ಸಂತಾಪ ಸೂಚಿಸಿದ್ದಾರೆ.
ಅದೇರೀತಿ ಸಚಿವ ಡಿ.ಕೆ ಶಿವಕುಮಾರ್ ಕೂಡ ಅನಂತ ಕುಮಾರ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಅನಂತ ಕುಮಾರ್ ಅವರ ಸಾವಿನ ಸುದ್ದಿ ಕೇಳಿ ಆಘಾತವಾಗಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಅಂತ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ಹೃದಯ ಭಾರವಾಗಿದೆ : ಅನಂತ ಕುಮಾರ್ ನಿಧನಕ್ಕೆ ಡಿವಿಎಸ್ ಸಂತಾಪ
ರಾಜ್ಯದಲ್ಲಿ ಬಿಜೆಪಿ ಕಟ್ಟಲು ಅನಂತ ಕುಮಾರ್ ಕೊಡುಗೆ ಅಪಾರ : ಬಿಎಸ್ ವೈ
ಅನಂತ ಕುಮಾರ್ ನಿಧನಕ್ಕೆ ಕಂಬನಿ ಮಿಡಿದ ಪ್ರಧಾನಿ
ಯಾವ್ದೇ ಸರ್ಕಾರವಿದ್ದರೂ ರಾಜ್ಯವನ್ನು ಸಮರ್ಥಿಸಿಕೊಳ್ತಿದ್ರು ಅನಂತ್ ಕುಮಾರ್