ಬೆಂಗಳೂರು : ಕೇಂದ್ರ ಸಚಿವ ಅನಂತ್ ಕುಮಾರ್ (59) ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.
ಅನಂತ್ ಕುಮಾರ್ ಬಹು ಅಂಗಾಂಗ ವೈಪಲ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಚಾಮರಾಜ ಪೇಟೆಯಲ್ಲಿನ ಶಂಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಕೊನೆಯುಸಿರೆಳೆದ್ರು.
ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕರ ಗಣ್ಯರು ಅಗಲಿದ ಸಚಿವರ ಅಂತಿಮ ದರ್ಶನ ಪಡೆಯಲು ಬರಲಿದ್ದಾರೆ. ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.
ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
TRENDING ARTICLES