ಅಜಾತ ಶತ್ರು ಕೇಂದ್ರ ಸಚಿವ ಅನಂತ ಕುಮಾರ್ ಅವರ ಅಂತ್ಯಸಂಸ್ಕಾರ ಚಾಮರಾಜಪೇಟೆಯ ಹಿಂದೂ ರುದ್ರಭೂಮಿಯಲ್ಲಿ ನೆರವೇರಿದೆ. ಅನಂತ ಕುಮಾರ್ ಪಂಚಭೂತಗಳಲ್ಲಿ ಲೀನರಾಗಿದ್ದಾರೆ.
ರಾಜಕಾರಣದಿಂದ ಆಚೆಗೆ ಎಲ್ಲಾ ಪಕ್ಷದವರಿಗೂ ಆಪ್ತರಾಗಿದ್ದ ಸ್ನೇಹಜೀವಿ ಅನಂತ ಕುಮಾರ್ ಅವ್ರ ಅಂತಿಮ ಸಂಸ್ಕಾರದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ, ಬಿಜೆಪಿ ರಾಜ್ಯಾಧ್ಯಕ್ಷದ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಕಾಶ್ ಜಾವ್ಡೇಕರ್, ರಾಜನಾಥ್‍ಸಿಂಗ್, ಮುರಳೀಧರ್ ರಾವ್, ಅನುರಾಗ್ ಠಾಕೋರ್, ಡಿ.ವಿ.ಸದಾನಂದಗೌಡ, ಸಚಿವ ಡಿ.ಕೆ ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು. ಭಾನುಪ್ರಕಾಶ್ ಶರ್ಮ, ಪ್ರಸನ್ನ ಕುಮಾರ್, ಸುಶಾಂತ್ ಶರ್ಮ, ವೆಂಕಟ ಚಲಪತಿ ಶಾಸ್ತ್ರಿಗಳು ಅಂತ್ಯಸಂಸ್ಕಾರ ನಡೆಸಿಕೊಟ್ರು. ಅನಂತ ಕುಮಾರ್ ಅವ್ರಿಗೆ ಗಂಡು ಮಕ್ಕಳಿಲ್ಲದ ಕಾರಣ ಅವ್ರ ಸಹೋದರ ನಂದಕುಮಾರ್ ಅವ್ರು ಅಂತಿಮ ವಿಧಿವಿಧಾನ ನೆರವೇರಿಸಿದ್ರು. ನಿನ್ನೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಅನಂತ ಕುಮಾರ್ ಅವರ ಅಂತಿಮ ದರ್ಶನ ಪಡೆದಿದ್ರು.