Wednesday, September 18, 2024

‘ನಟಸಾರ್ವಭೌಮ’ ಡಬ್ಬಿಂಗ್ ಕಂಪ್ಲೀಟ್..!

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ನಟ ಸಾರ್ವಭೌಮ ಡಬ್ಬಿಂಗ್ ಕಂಪ್ಲೀಟ್ ಆಗಿದ್ದು, ಸ್ವತಃ ಅಪ್ಪು ಈ ವಿಷ್ಯವನ್ನು ತಿಳಿಸಿದ್ದಾರೆ.
ನಟಸಾರ್ವಭೌಮ ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ಚಿತ್ರ. ಈಗಾಗಲೇ ಪುನೀತ್ ಸ್ಟಿಲ್ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ. ಇದೀಗ ಪುನೀತ್ ರಾಜ್ ಕುಮಾರ್ ಸೆಲ್ಫಿಯನ್ನು ಟ್ವೀಟರ್ ನಲ್ಲಿ ಪೋಸ್ಟ್ ಮಾಡಿ, ಡಬ್ಬಿಂಗ್ ಕಂಪ್ಲೀಟ್ ಆಗಿದೆ ಅಂತ ಹೇಳಿಕೊಂಡಿದ್ದಾರೆ.
ಇನ್ನು ನಟಸಾರ್ವಭೌಮ ಪವನ್ ಒಡೆಯರ್ ನಿರ್ದೇಶನದ ಚಿತ್ರ. ಈ ಸಿನಿಮಾದಲ್ಲಿ ಮೊದಲ ಬಾರಿಗೆ ಜರ್ನಲಿಸ್ಟ್ ರೋಲ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಡಿಂಪಲ್ ಕ್ವೀನ್ ರಚಿತಾ ರಾಮ್ ಮತ್ತು ಮಾಲಿವುಡ್ ಚೆಲುವೆ ಅನುಪಮ ಪರಮೇಶ್ವರನ್ ಚಿತ್ರದ ಇಬ್ಬರು ನಾಯಕಿಯರು.
ಸ್ಟಾರ್ ನಟರ ಸಿನಿಮಾಗಳು ಸಾಲು ಸಾಲಾಗಿ ಬರ್ತಾ ಇವೆ. ಇತ್ತೀಚೆಗೆ ಕರುನಾಡ ಚಕ್ರವರ್ತಿ ಡಾ.ಶಿವರಾಜ್ ಕುಮಾರ್, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ದಿ ವಿಲನ್’ ಇತ್ತೀಚೆಗಷ್ಟೇ ರಿಲೀಸ್ ಆಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಡಿಸೆಂಬರ್ 21ರಂದು ಕನ್ನಡ , ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ರಿಲೀಸ್ ಆಗ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕುರುಕ್ಷೇತ್ರ, ಯಜಮಾನ ರೆಡಿ ಆಗ್ತಿವೆ. ಇದೀಗ ಸದ್ಯದಲ್ಲೇ ‘ನಟಸಾರ್ವಭೌಮ’ ನಾಗಿ ಅಪ್ಪು ಬರ್ತಿದ್ದಾರೆ.

RELATED ARTICLES

Related Articles

TRENDING ARTICLES