ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತವರಿಗೆ ಬಂದಿದ್ದಾರೆ. ಮದ್ವೆ ಆದ ಬಳಿಕ ಮೊದಲ ಬಾರಿಗೆ ಪತಿ ರಣವೀರ್ ಸಿಂಗ್ ಜೊತೆ ದೀಪಿಕಾ ಬೆಂಗಳೂರಿಗೆ ಆಗಮಿಸಿದ್ದಾರೆ.
ಮುಂಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ದೀಪಿಕಾ-ರಣವೀರ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.
ಇತ್ತೀಚೆಗೆ ಇಟಲಿಯ ಲೇಕ್ ಕೊಮಾದಲ್ಲಿ ದೀಪಿಕಾ ಮತ್ತು ರಣವೀರ್ ಸಿಂಗ್ ಮದ್ವೆ ನಡೆದಿತ್ತು. ಕುಟುಂಬವರು ಹಾಗೂ ಕೆಲವೇ ಕೆಲವು ಆಪ್ತರ ಸಮ್ಮುಖದಲ್ಲಿ ದೀಪಿಕಾ ಮತ್ತು ರಣವೀರ್ ದಾಂಪತ್ಯಕ್ಕೆ ಕಾಲಿಟ್ಟಿದ್ದರು. ಇದೀಗ ನವೆಂಬರ್ 21ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಬಾಲಿವುಡ್ ಮತ್ತು ದಕ್ಷಿಣ ಭಾರತ ಚಿತ್ರರಂಗದ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
https://www.facebook.com/powertvnews/videos/739145276443685/?t=0