ಜಮ್ಮು-ಕಾಶ್ಮೀರ : ಉಗ್ರರ ಅಟ್ಟಹಾಸ ಮುಂದುವರೆದಿದೆ. ಜಮ್ಮು-ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿನ ಸೇನಾ ಶಿಬಿರದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಸೇನಾ ಶಿಬಿರದ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಸೇನಾಪಡೆಗಲು ಕೂಡಲೇ ಉಗ್ರರ ವಿರುದ್ಧ ಕಾರ್ಯಾಚರಣೆಗೆ ಇಳಿದಿವೆ.
ಸೇನಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ ಅಂತ ವರದಿಯಾಗಿದೆ. ದಾಳಿಯಲ್ಲಿ ಓರ್ವ ನಾಗರಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಅಂತ ತಿಳಿದುಬಂದಿದೆ.