Friday, September 13, 2024

ಪಾಕ್ ನಲ್ಲಿ ಚೀನಾ ರಾಯಭಾರಿ ಕಚೇರಿ ಮೇಲೆ ದಾಳಿ

ಕರಾಚಿ : ಪಾಕಿಸ್ತಾನದ ರಾಜಧಾನಿ ಕರಾಚಿಯಲ್ಲಿ ಚಿನಾ ರಾಯಭಾರಿ ಕಚೇರಿ ಮೇಲೆ ಬಂಧೂಕುದಾರಿಗಳು ದಾಳಿ ನಡೆಸಿದ್ದು, ಇಬ್ಬರು ಪೊಲೀಸರು ಮೃತಪಟ್ಟಿದ್ದಾರೆ.
ಶುಕ್ರವಾರ ಬೆಳಗ್ಗೆ 4.30ರ ಸುಮಾರಿಗೆ ದಾಳಿ ನಡೆದಿದ್ದು, ಭದ್ರತಾ ಸಿಬ್ಬಂದಿ ಕೂಡಲೇ ಎಚ್ಚೆತ್ತುಕೊಂಡು ಕಾರ್ಯಾಚರಣೆಗೆ ಇಳಿದಿದ್ದಾರೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸರು ಸಾವನ್ನಪ್ಪಿದ್ದಾರೆ.
ಭದ್ರತಾ ಸಿಬ್ಬಂದಿ ತಕ್ಷಣವೇ ಎಚ್ಚೆತ್ತುಕೊಂಡಿದ್ದರಿಂದ ಬಂಧೂಕು ದಾರಿಗಳ ಕಚೇರಿಯನ್ನು ಪ್ರವೇಶಿಸಿಲು ವಿಫಲರಾಗಿದ್ದಾರೆ. ಇದರಿಂದ ಹೆಚ್ಚಿನ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಸ್ಪೋಟಗೊಂಡಿರೋ ಪರಿಣಾಮವಾಗಿ ಹೊಗೆ ಆವರಿಸಿಕೊಂಡಿದೆ.

RELATED ARTICLES

Related Articles

TRENDING ARTICLES