ಸ್ಯಾಂಡಲ್ ವುಡ್ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಅಂಬರೀಶ್ ಅವರನ್ನು ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ಸೇರಿಸಲಾಗಿದೆ. ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಮಂಡ್ಯ ಸಂಸದ ಶಿವರಾಮೇಗೌಡ, ನಗರ ಪೊಲೀಸ್ ಆಯುಕ್ತರಾದ ಸುನೀಲ್ ಕುಮಾರ್ ಮತ್ತಿತರರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಡಾ.ಸತೀಶ್ ಮತ್ತು ತಂಡ ಚಿಕಿತ್ಸೆ ನೀಡುತ್ತಿದೆ ಅಂತ ತಿಳಿದುಬಂದಿದೆ.