ಮಂಡ್ಯ: ಖಾಸಗಿ ಬಸ್ ನಾಲೆಗೆ ಉರುಳಿ 20ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಪಾಂಡವಪುರ ತಾಲೂಕಿನ ಕನಗನಮರಡಿ ಸಮೀಪ ಈ ಘಟನೆ ನಡೆದಿದಿದೆ. ಚಾಲಕನ ನಿರ್ಲಕ್ಷ್ಯದಿಂದ ಬಸ್ ವಿಶ್ವೇಶ್ವರಯ್ಯ ನಾಲೆಗೆ ಉರುಳಿದ್ದು, ಮಕ್ಕಳು ಸೇರಿದಂತೆ 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಅಂತ ತಿಳಿದುಬಂದಿದೆ. ಬಸ್ ಪಾಂಡವಪುರದಿಂದ ಮಂಡ್ಯಕ್ಕೆ ತೆರಳುತ್ತಿತ್ತು.
ಘಟನೆ ಬಗ್ಗೆ ಸಿಎಂ ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಸಿಎಂ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಆರಂಭವಾಗಿದ್ದು, ಸ್ಥಳೀಯರು ಸಾಥ್ ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್ ಪುಟ್ಟರಾಜು ಸ್ಥಳಕ್ಕೆ ಆಗಮಿಸಿದ್ದಾರೆ. ಸಿಎಂ ಕುಮಾರಸ್ವಾಮಿ ಅವ್ರು ರಾಮನಗರ ಕಾರ್ಯಕ್ರಮವನ್ನು ರದ್ದುಗೊಳಿಸಿ ಘಟನಾ ಸ್ಥಳಕ್ಕೆ ತೆರಳುತ್ತಿದ್ದಾರೆ.
ಮಂಡ್ಯ ದುರಂತಕ್ಕೆ ಮೋದಿ, ರಾಹುಲ್ ಸಂತಾಪ
ಸಾವಿನ ಸಂಖ್ಯೆ 25ಕ್ಕೆ ಏರಿಕೆ, ನಾಲ್ವರು ಪ್ರಾಣಾಪಾಯದಿಂದ ಪಾರು