Tuesday, October 15, 2024

ರಾಹುಲ್ ಮತ್ತು ಪಾಂಡ್ಯಗೆ ಶಿಕ್ಷೆ

ಟೀಮ್ ಇಂಡಿಯಾ ಬ್ಯಾಟ್ಸ್ ಮನ್ ಕೆ.ಎಲ್ ರಾಹುಲ್ ಮತ್ತು ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಮೊದಲ ಒಡಿಐನಿಂದ ಕೈಬಿಡಲಾಗಿದೆ. ಖಾಸಗಿ ರಿಯಾಲಿಟಿ ಶೋವೊಂದರಲ್ಲಿ ಭಾಗಿಯಾಗಿದ್ದ ರಾಹುಲ್ ಮತ್ತು‌‌‌ ಪಾಂಡ್ಯ ಮಹಿಳೆಯರು ಮತ್ತು ಸೆಕ್ಸ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರು.‌ ಇದು ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಬಿಸಿಸಿಐ ಇಬ್ಬರಿಗೆ ಶೋಕಾಸ್ ನೋಟಿಸ್ ನೀಡಿತ್ತು. ಇಬ್ಬರು ಉತ್ತರವನ್ನು ನೀಡಿದ್ದರು. ಅಶಿಸ್ತಿನ ನಡೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಬಿಸಿಸಿಐ ಒಂದು‌ ಮ್ಯಾಚ್ ನಿಂದ ನಿಷೇಧಗೊಳಿಸಿ ಆದೇಶ ಹೊರಡಿಸಿದೆ.

RELATED ARTICLES

Related Articles

TRENDING ARTICLES