Wednesday, October 4, 2023
Powertv Logo

Kannada Kannada English English Hindi Hindi Telugu Telugu Tamil Tamil Malayalam Malayalam

Homeರಾಜಕೀಯಮೋದಿ-ಕುಮಾರಸ್ವಾಮಿ`ಕ್ಲರ್ಕ್'​ ವಾರ್!

ಮೋದಿ-ಕುಮಾರಸ್ವಾಮಿ`ಕ್ಲರ್ಕ್’​ ವಾರ್!

ನವದೆಹಲಿ : ಕರ್ನಾಟಕದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ ಪಕ್ಷ ಕ್ಲರ್ಕ್​ ರೀತಿ ಟ್ರೀಟ್ ಮಾಡ್ತಿದೆ ಅಂತ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಮ್​ ಲೀಲಾ ಮೈದಾನದಲ್ಲಿ ನಡೆದ ಬಿಜೆಪಿ ಸಮಾವೇಶದ ಎರಡನೆ ಹಾಗೂ ಕೊನೆಯ ದಿನವಾದ ಶನಿವಾರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ”ತೆಲಂಗಾಣದಲ್ಲಿ ಟಿಡಿಪಿಯೊಂದಿಗೆ ಮಾಡಿಕೊಂಡಿದ್ದ ಕಾಂಗ್ರೆಸ್​ ಮೈತ್ರಿ ವಿಫಲವಾಯ್ತು. ಕರ್ನಾಟಕದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವಿದೆ. ಅಲ್ಲಿ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ ಕ್ಲರ್ಕ್​ ರೀತಿ ನಡೆಸಿಕೊಳ್ಳುತ್ತಿದೆ. ಅದನ್ನು ಅವರೇ ಹೇಳಿಕೊಂಡಿದ್ದಾರೆ. ಅವರ ಮೇಲೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂದರು.
ಮೋದಿ ತಪ್ಪು ಮಾಹಿತಿ ನೀಡ್ತಿದ್ದಾರೆ : ಮೋದಿ ಹೇಳಿಕೆಗೆ ಟ್ವೀಟ್ ಮೂಲಕ ಕುಮಾರ ಸ್ವಾಮಿ ತಿರುಗೇಟು ನೀಡಿದ್ದಾರೆ. ನಾನು ಸಮ್ಮಿಶ್ರ ಸರ್ಕಾರದಲ್ಲಿ ಒತ್ತಡ ಇದೆ ಹೇಳಿಲ್ಲ. ಮೋದಿ ತಪ್ಪು ಮಾಹಿತಿ ನೀಡಿದ್ದಾರೆ. ಅವರ ಇಂಥಾ ಹೇಳಿಕೆಗಳು ಸಮ್ಮಿಶ್ರ ಸರ್ಕಾರದ ಕೆಲಸಗಳಿಗೆ ಅಡ್ಡಿ ಆಗಲ್ಲ ಅಂದಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments