Wednesday, October 30, 2024

ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಅತೃಪ್ತರ ಯತ್ನ

ಯಾವುದೇ ಕಾರಣಕ್ಕೂ ಪಕ್ಷ ತೊರೆಯಲ್ಲ ಅಂತ ಗೋಕಾಕ್​ ಶಾಸಕ ರಮೇಶ್​ ಜಾರಕಿಹೊಳಿ ಹೇಳಿದ್ದಾರೆ. ಈ ಮೂಲಕ ರಮೇಶ್ ಜಾರಕಿಹೊಳಿ ಪಕ್ಷ ಬಿಡ್ತಾರೆ ಅನ್ನೋ ವದಂತಿಗೆ ಫುಲ್​ಸ್ಟಾಪ್ ಬಿದ್ದಂತಾಗಿದೆ. ಆದರೆ ಶಾಸಕರು ಬೀಸೋ ದೊಣ್ಣೆಯಿಂದ ತಪ್ಪಿಸ್ಕೊಳ್ಳೋಕೆ ಈ ರೀತಿ ಹೇಳ್ತಿದ್ದಾರೆ ಅನ್ನೋ ಮಾತುಗಳೂ ಕೇಳಿ ಬರ್ತಿದೆ.

ಸಿಎಲ್​ಪಿ ಸಭೆಗೆ ಗೈರಾಗಿದ್ದ ರಮೇಶ್​ ಜಾರಕಿಹೊಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ನೋಟಿಸ್ ನೀಡಿದ್ರು. ನೋಟಿಸ್​ಗೆ ಪ್ರತಿಕ್ರಿಯಿಸಿದ ರಮೇಶ್ ಜಾರಕಿಹೊಳಿ “ನಾನು ಯಾವುದೇ ಕಾರಣಕ್ಕೂ ಪಕ್ಷ ತೊರೆಯಲ್ಲ. ಮಗನ ಮದುವೆ ವಿಚಾರದಲ್ಲಿ ಬ್ಯುಸಿ ಇದ್ದೆ” ಅಂತ ಪ್ರತಿಕ್ರಿಯಿಸಿದ್ದಾರೆ. ಕುಮಟಳ್ಳಿ, ನಾಗೇಂದ್ರ, ಉಮೇಶ್ ಜಾಧವ್ ಕೂಡ ನೋಟಿಸ್​​ಗೆ ಉತ್ತರ ನೀಡಿದ್ದಾರೆ.

RELATED ARTICLES

Related Articles

TRENDING ARTICLES