ಬೀದರ್ : ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ್ರು, ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮತ್ತು ಎಪಿಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಜಿಲ್ಲೆಯ ಲೋಕಸಭಾ ಸೀಟು ಹಂಚಿಕೆ ತೀರ್ಮಾನ ತೆಗೆದುಕೊಳ್ತಾರೆ ಅಂತ ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದ್ರು. ಈ ಮೂಲಕ ‘ಲೋಕ’ ಸಮರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸೂಚನೆ ನೀಡಿದ್ರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಟಿಕೆಟ್ ಹಂಚಿಕೆಯಾಗಬೇಕು. ಮಾಜಿ ಪ್ರಧಾನಿ ಎಚ್.ಡಿ ದೇವೆಗೌಡ್ರು, ಸಿಎಂ ಕುಮಾರಸ್ವಾಮಿ ಹಾಗೂ ಎಐಸಿಸಿ ಅಧ್ಯಕ್ಷ್ಯ ರಾಹುಲ್ ಗಾಂಧಿ ಅವರು ಯಾವ ಜಿಲ್ಲೆ ಜೆಡಿಎಸ್ಗೆ ಬಿಡಬೇಕು ಎಂದು ಟಿಕೆಟ್ ಹಂಚಿಕೆಯ ಬಗ್ಗೆ ತೀರ್ಮಾನ ತೆಗೆದು ಕೊಳ್ತಾರೆ. ಸಮ್ಮಿಶ್ರ ಸರ್ಕಾರ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಕೂಡ ಇದೇ ಮಾದರಿಯಲ್ಲಿ ಕೆಲಸ ಮಾಡಲಾಗುವುದು ಎಂದು ಹೇಳಿದ್ರು.
ದೇವೇಗೌಡ್ರು, ಕುಮಾರಸ್ವಾಮಿ, ರಾಹುಲ್ ಗಾಂಧಿ ಟಿಕೆಟ್ ಹಂಚಿಕೆ ತೀರ್ಮಾನ ತಗೊಳ್ತಾರಂತೆ!
TRENDING ARTICLES