ನವದೆಹಲಿ : ರಾಜ್ಯದಲ್ಲಿನ ‘ದೋಸ್ತಿ’ ಮುನಿಸು ಕಾಂಗ್ರೆಸ್ ಹೈಕಮಾಂಡ್ಗೆ ದೊಡ್ಡ ತಲೆನೋವಾಗಿದೆ. ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಬಗ್ಗೆ ಬೇಕಾಬಿಟ್ಟಿ ಹೇಳಿಕೆ ನೀಡುತ್ತಾ… ತಮ್ಮ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯನವರ ಗುಣಗಾನ ಮಾಡೋದ್ರಲ್ಲಿ ಬ್ಯುಸಿ ಇದ್ದಾರೆ. ಇದರಿಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮುರಿದು ಬೀಳುವ ಸಾಧ್ಯತೆ ಇದೆ.
ಕಾಂಗ್ರೆಸ್ ಶಾಸಕರು ಮನಬಂದಂತೆ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ನಾಯಕರ ವಿರುದ್ಧ ಹೇಳಿಕೆಗಳನ್ನು ನೀಡುತ್ತಿರುವುದಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯ ಕಾಂಗ್ರೆಸ್ ನಾಯಕರಿಗೆ ಚಾಟಿ ಬೀಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿಮ್ಮ ಬೆಂಬಲಿಗರನ್ನು ಹದ್ದುಬಸ್ತಿನಲ್ಲಿಡಿ ಎಂದು ಖಡಕ್ ಸೂಚನೆ ನೀಡಿದ್ದಾರೆ.
‘ನಿಮ್ಮ ಅನುಯಾಯಿಗಳೇ ಹೆಚ್ಚು ಮಾತಾಡ್ತಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಕಾಂಗ್ರೆಸ್ಗೆ ಅಗತ್ಯ. ನಿಮ್ಮ ಬೆಂಬಲಿಗರ ಹೇಳಿಕೆಗಳಿಂದ ಸರ್ಕಾರಕ್ಕೆ ತೊಂದರೆ ಆಗುತ್ತಿದೆ. ಇದು ಚುನಾವಣೆಯಲ್ಲಿ ಪಕ್ಷಕ್ಕೆ ದೊಡ್ಡ ಡ್ಯಾಮೇಜ್ ಮಾಡುತ್ತದೆ.ಪಕ್ಷ ಹೇಳಿದ ಹಾಗೆ ಶಾಸಕರು ಕೇಳಬೇಕು’ ಎಂದು ರಾಹುಲ್ ಗಾಂಧಿ ಸಿದ್ದರಾಮಯ್ಯ ಅವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.