ದಾವಣಗೆರೆ : ಚುನಾವಣೆಯಲ್ಲಿ ಗೆದ್ದರೆ ಸಿನಿಮಾದಲ್ಲಿ ನಟಿಸುವುದನ್ನು ನಿಲ್ಲಿಸುತ್ತೇನೆ ಎಂದು ನಟ ಉಪೇಂದ್ರ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯುಪಿಪಿ ಅಧ್ಯಕ್ಷರೂ ಆಗಿರುವ ಅವರು, ‘ಭವಿಷ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಗೆದ್ದರೆ ತಾನು ಸಿನಿಮಾದಲ್ಲಿ ನಟಿಸುವುದನ್ನು ನಿಲ್ಲಿಸ್ತೀನಿ’ ಅಂತ ಹೇಳಿದ್ದಾರೆ.
ರಾಜ್ಯಕ್ಕೆ ಒಂದು ಒಳ್ಳೆಯ ಪ್ರಾದೇಶಿಕ ಪಕ್ಷದ ಅವಶ್ಯಕತೆ ಇದೆ. ಲೋಕಸಭಾ ಚುನಾವಣೆಯಲ್ಲಿ ತಮ್ಮ ಯುಪಿಪಿ (ಉತ್ತಮ ಪ್ರಜಾಕೀಯ ಪಕ್ಷ)ದಿಂದ ರಾಜ್ಯದ 28 ಲೋಕಸಭಾ ಕ್ಷೇತ್ರಗಳನ್ನು ಕಣಕ್ಕಿಳಿಸಲಾಗುತ್ತದೆ. ಆದರೆ ನಾನು ಯಾವ್ದೇ ಕ್ಷೇತ್ರದಿಂದಲೂ ಸ್ಪರ್ಧಿಸುವುದಿಲ್ಲ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸ್ತೀನಿ. ಗೆದ್ದರೆ ಚಲನಚಿತ್ರಗಳಲ್ಲಿ ನಟಿಸುವುದನ್ನು ನಿಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಹೀಗೆ ರಾಜಕೀಯಕ್ಕೆ ಎಂಟ್ರಿ ಕೊಟ್ಟು ಸಿಹಿ ಸುದ್ದಿ ಕೊಟ್ಟಿರುವ ಉಪೇಂದ್ರ ಚುನಾವಣೆಯಲ್ಲಿ ಗೆದ್ದರೆ ನಟಿಸಲ್ಲ ಎಂದು ಹೇಳುವ ಮೂಲಕ ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ