ಚಂಡೀಗಢ: ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಡೋದು ಬಹುತೇಕ ಕನ್ಫರ್ಮ್ ಆಗಿದೆ. ಲೋಕಸಭಾ ಚುನಾವಣೆಗೆ ಕಣಕ್ಕಿಳಿಯುವ ಮೂಲಕ ವೀರೂ ಮತ್ತೊಂದು ಹೊಸ ಇನ್ನಿಂಗ್ಸ್ ಶುರುಮಾಡಲಿದ್ದಾರೆ ಎಂಬ ಮಾತು ಎಲ್ಲೆಡೆ ಕೇಳಿಬರುತ್ತಿದೆ.
ಸೆಹ್ವಾಗ್ ಹರಿಯಾಣದಿಂದ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಬಿಜೆಪಿ ಸೆಹ್ವಾಗ್ ಅವರನ್ನು ತಮ್ಮ ಪಕ್ಷದಿಂದ ಕಣಕ್ಕಿಳಿಸಲು ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.
ಹರಿಯಾಣದ ಬಿಜೆಪಿ ಕೋರ್ಕಮಿಟಿ ಸಭೆಯಲ್ಲಿ ಸೆಹ್ವಾಗ್ ಭಾನುವಾರ ಭಾಗವಹಿಸಿದ್ದರು. ಸಭೆಯಲ್ಲಿ ರೋಹ್ಟರ್ ಕ್ಷೇತ್ರದಿಂದ ಸೆಹ್ವಾಗ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಹೇಳಲಾಗುತ್ತಿದೆ.
ರೋಹ್ಟಕ್ ಕ್ಷೇತ್ರದಿಂದ ಕಾಂಗ್ರೆಸ್ ಕ್ಯಾಂಡಿಡೇಟ್ ದೀಪೆಂದರ್ ಸಿಂಗ್ ಅವರು ಸತತ ಮೂರು ಬಾರಿ ಸ್ಪರ್ಧಿಸಿ ಗೆದ್ದಿದ್ದಾರೆ. ಇವರನ್ನು ಸೋಲಿಸಲು ಬಿಜೆಪಿ ಸೆಹ್ವಾಗ್ ಅವರನ್ನು ಕಣಕ್ಕಿಳಿಸೋ ಪ್ಲಾನ್ ಮಾಡಿದೆ ಎಂಬ ಮಾತು ಬಲವಾಗಿ ಕೇಳಿ ಬರುತ್ತಿದೆ.
ಲೋಕಸಭಾ ಚುನಾವಣೆಗೆ ಸ್ಪರ್ಧಿಸ್ತಾರಾ ವೀರೇಂದ್ರ ಸೆಹ್ವಾಗ್?
TRENDING ARTICLES