Thursday, May 30, 2024

ಬಿಎಸ್​ವೈಗೆ ಸಿಎಂ ಆಗೋ ಹುಚ್ಚು ಹಿಡಿದೆ ಅಂದ್ರು ಸಿದ್ದರಾಮಯ್ಯ..!

ನವದೆಹಲಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರಿಗೆ ಸಿಎಂ ಆಗೋ ಹುಚ್ಚು ಹಿಡಿದಿದೆ ಅಂತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ಜೊತೆ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಅವರು, ಬಿ.ಎಸ್​ ಯಡಿಯೂರಪ್ಪ ಅವರಿಗೆ ಸಿಎಂ ಆಗೋ ಹುಚ್ಚು ಹಿಡಿದೆ. ಆದರೆ, ಅವರ ಆಸೆ ಈಡೇರಲ್ಲ. ಸದ್ಯ ಮೈತ್ರಿ ಸರ್ಕಾರಕ್ಕೆ ಯಾವ್ದೇ ಅಪಾಯ ಎದುರಾಗಲ್ಲ ಎಂದು ಹೇಳಿದರು.
ಎಐಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ವಿಚಾರದ ಬಗ್ಗೆಯೂ ಚರ್ಚೆ ನಡೆಯಿತು. ಈ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಸೀಟು ಹಂಚಿಕೆ ಬಗ್ಗೆ ಜೆಡಿಎಸ್​ ಮತ್ತು ಕಾಂಗ್ರೆಸ್​ ನಾಯಕರ ಸಭೆ ಕರೆದು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತೆ ಅಂತ ಹೇಳಿದ್ರು.

RELATED ARTICLES

Related Articles

TRENDING ARTICLES