Monday, May 20, 2024

ರಾಜೀನಾಮೆ ಕೊಡ್ತಾರಂತೆ ಶಾಸಕ ಉಮೇಶ್ ಜಾಧವ್​..!

ಕಲಬುರಗಿ : ಚಿಂಚೊಳ್ಳಿ ಶಾಸಕ ಡಾ. ಉಮೇಶ್ ಜಾಧವ್​ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಇಂದು ಸಂಜೆಯೊಳಗೆ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಅಂತ ತಿಳಿದುಬಂದಿದೆ.
‘ಉಮೇಶ್ ಜಾಧವ್ ಅವರು ಕಾನೂನು ತಜ್ಞರ ಜೊತೆ ಚರ್ಚೆ ನಡೆಸುತ್ತಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸ್ತಾರೆ. ಕಾಂಗ್ರೆಸ್​ ಪಕ್ಷಕ್ಕೆ ಮರಳಿ ಬರುವ ನಿರ್ಧಾರ ತೆಗೆದುಕೊಳ್ಳಲ್ಲ. ಇಂದು ಅಥವಾ ನಾಳೆ ತಮ್ಮ ಸ್ಪಷ್ಟ ತೀರ್ಮಾನವನ್ನು ತಿಳಿಸಲಿದ್ದಾರೆ’ ಎಂದು ಅವರ ಸಹೋದರ ರಾಮಚಂದ್ರ ಜಾಧವ್ ಕಲಬುರಗಿಯಲ್ಲಿ  ಹೇಳಿದ್ದಾರೆ.

RELATED ARTICLES

Related Articles

TRENDING ARTICLES