ವಿಜಯಪುರ : ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪ ಅವರಿಗೆ ಮೆದುಳು ಸರಿಯಾಗಿ ಕೆಲಸ ಮಾಡ್ತಿಲ್ಲ ಅಂತ ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮತಿ ಅಧ್ಯಕ್ಷ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಆಡಿಯೋ ಪ್ರಕರಣದಲ್ಲಿ ಮುಖ್ಯಮಂತ್ರಿ ಹೆಚ್,ಡಿ ಕುಮಾರಸ್ವಾಮಿ ಅವರನ್ನು ಸಿಲುಕಿಸಲು ಸಿದ್ದರಾಮಯ್ಯ ಎಸ್ಐಟಿ ತನಿಖೆಗೆ ಒತ್ತಾಯಿಸಿದ್ದು ಎಂಬ ಈಶ್ವರಪ್ಪ ಅವರ ಹೇಳಿಕೆ ವಿರುದ್ಧ ಅವರು (ಸಿದ್ದರಾಮಯ್ಯ) ಗರಂ ಆಗಿ ವಾಗ್ದಾಳಿ ನಡೆಸಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು, ”ಈಶ್ವರಪ್ಪ ಅವರಿಗೆ ಮೆದುಳು ಸರಿಯಾಗಿ ಕೆಲಸ ಮಾಡ್ತಿಲ್ಲ. ಹೀಗಾಗಿ ಬಾಯಿಗೆ ಬಂದಂಗೆ ಮಾತನಾಡ್ತಾರೆ. ಬಿಎಸ್ವೈ ಆಡಿಯೋ ಪ್ರಕರಣವನ್ನು ಮುಖ್ಯಮಂತ್ರಿಗಳು ಎಸ್ಐಟಿ ತನಿಖೆಗೆ ಒಪ್ಪಿಸಿದ್ದಾರೆ. ನಾವು ತನಿಖೆಯಲ್ಲಿ ಹಸ್ತಕ್ಷೇಪ ಮಾಡಲ್ಲ. ಯಾರು ತಪ್ಪು ಮಾಡಿದ್ರೂ ಶಿಕ್ಷೆ ಅನುಭವಿಸಲೇ ಬೇಕು” ಎಂದರು.
ಈಶ್ವರಪ್ಪಗೆ ಮೆದುಳು ಸರಿಯಾಗಿ ಕೆಲಸ ಮಾಡ್ತಿಲ್ಲ : ಸಿದ್ದರಾಮಯ್ಯ
TRENDING ARTICLES