Wednesday, January 22, 2025

ಬುಲೆಟ್​​ಗೆ ಬುಲೆಟ್​ನಿಂದಲೇ ಉತ್ತರ: ಅಮಿತ್ ಶಾ

ಜೈಪುರ: ಬುಲೆಟ್​ಗೆ ಬುಲೆಟ್​ನಿಂದಲೇ ಉತ್ತರ ಕೊಡಬೇಕು ಅಂತ ಬಿಜೆಪಿ ಅಧ್ಯಕ್ಷ ಅಮಿತ್​ ಶಾ ಜೈಪುರದಲ್ಲಿ ಹೇಳಿದ್ದಾರೆ. ಜೈಪುರದಲ್ಲಿ ನಡೆಯುತ್ತಿರುವ ಶಕ್ತಿ ಕೇಂದ್ರ ಸಮ್ಮೇಳನದಲ್ಲಿ ಪುಲ್ವಾಮಾ ಉಗ್ರರ ದಾಳಿ ಬಗ್ಗೆ ಮಾತನಾಡಿದ ಅಮಿತ್​ ಶಾ, “ಪಾಕಿಸ್ತಾನದ ಹೇಡಿತನಕ್ಕೆ ನಮ್ಮ ಸೈನಿಕರು ತಕ್ಕ ಉತ್ತರ ನೀಡುತ್ತಾರೆ. ಹುತಾತ್ಮ ಯೋಧರ ಕುಟುಂಬದ ಜೊತೆ ನಾವಿದ್ದೇವೆ” ಅಂತ ಹೇಳಿದ್ದಾರೆ.

ಜಮ್ಮುಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಸಿಆರ್​ಪಿಎಫ್ ಯೋಧರ ಮೇಲೆ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಅಮಿತ್​ ಶಾ, “ಪ್ರಧಾನಿ ನರೇಂದ್ರ ಮೋದಿಯವರು ನಮ್ಮ ಯೋಧರ ತ್ಯಾಗವನ್ನು ವ್ಯರ್ಥವಾಗಲು ಬಿಡುವುದಿಲ್ಲ. ಪಾಕಿಸ್ತಾನಕ್ಕೆ ಸರಿಯಾದ ಪಾಠ ಕಲಿಸಲಿದೆ. ಬಿಜೆಪಿ ನೇತೃತ್ವದ ಸರ್ಕಾರ ಪಾಕಿಸ್ತಾನಕ್ಕೆ ಸರಿಯಾದ ಉತ್ತರ ನೀಡಲಿದೆ” ಅಂತ ಹೇಳಿದ್ದಾರೆ.

RELATED ARTICLES

Related Articles

TRENDING ARTICLES