ದೆಹಲಿ: ಬಿಸಿಸಿಐ ಮತ್ತು ಸರ್ಕಾರ ಏನು ನಿರ್ಧಾರ ತೆಗೆದುಕೊಂಡರೂ ಅದನ್ನು ಪಾಲಿಸಲು ನಮ್ಮ ಟೀಮ್ ಬದ್ಧವಾಗಿದೆ ಅಂತ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಪಾಕ್ ಜೊತೆ ಭಾರತ ಆಡುವ ಬಗ್ಗೆ ತೀವ್ರ ಚರ್ಚೆಗಳಾಗುತ್ತಿದ್ದು ಈ ವಿಚಾರದಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಕೊನೆಗೂ ಮೌನ ಮುರಿದಿದ್ದಾರೆ.
#WATCH Virat Kohli on Ind Vs Pak in World Cup says, "Our sincere condolences to the families of CRPF soldiers who lost their lives in #PulwamaAttack. We stand by what the nation wants to do and what the BCCI decides to do." pic.twitter.com/gjyJ9qDxts
— ANI (@ANI) February 23, 2019
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಟೀಮ್ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಸಂತಾಪ ಸೂಚಿಸಿದ್ದಾರೆ. ಈ ವಿಚಾರದಲ್ಲಿ ಬಿಸಿಸಿಐ ಹಾಗೂ ಸರ್ಕಾರ ಏನು ನಿರ್ಧಾರ ತೆಗೆದುಕೊಳ್ಳುತ್ತದೋ ಅದನ್ನು ಪಾಲಿಸುವುದಾಗಿ ಅವರು ಹೇಳಿದ್ದಾರೆ.