Saturday, June 22, 2024

ವಿಶ್ವಕಪ್​​ನಲ್ಲಿ ಪಾಕ್​ ಜೊತೆ ಆಡುವ ಕುರಿತು ಮೌನ ಮುರಿದ ವಿರಾಟ್​..!

ದೆಹಲಿ: ಬಿಸಿಸಿಐ ಮತ್ತು ಸರ್ಕಾರ ಏನು ನಿರ್ಧಾರ ತೆಗೆದುಕೊಂಡರೂ ಅದನ್ನು ಪಾಲಿಸಲು ನಮ್ಮ ಟೀಮ್​ ಬದ್ಧವಾಗಿದೆ ಅಂತ ಟೀಮ್​ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಹೇಳಿದ್ದಾರೆ. ಪಾಕ್​ ಜೊತೆ ಭಾರತ ಆಡುವ​ ಬಗ್ಗೆ ತೀವ್ರ ಚರ್ಚೆಗಳಾಗುತ್ತಿದ್ದು ಈ ವಿಚಾರದಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್​ ಕೊಹ್ಲಿ ಕೊನೆಗೂ ಮೌನ ಮುರಿದಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಟೀಮ್​ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಸಂತಾಪ ಸೂಚಿಸಿದ್ದಾರೆ. ಈ ವಿಚಾರದಲ್ಲಿ ಬಿಸಿಸಿಐ ಹಾಗೂ ಸರ್ಕಾರ ಏನು ನಿರ್ಧಾರ ತೆಗೆದುಕೊಳ್ಳುತ್ತದೋ ಅದನ್ನು ಪಾಲಿಸುವುದಾಗಿ ಅವರು ಹೇಳಿದ್ದಾರೆ.

RELATED ARTICLES

Related Articles

TRENDING ARTICLES