ಶ್ರೀನಗರ: ಜಮ್ಮುಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೇನೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿ ಹುತಾತ್ಮರಾಗಿದ್ದಾರೆ. ಪೊಲೀಸ್ ಹಾಗೂ ಕೇಂದ್ರ ಮೀಸಲು ಪೊಲೀಸ್ ಪಡೆ, ಸೇನೆ ಕಾರ್ಯಾಚರಣೆ ನಡೆಸಿದ್ದು ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ 3 ಯೋಧರು ಗಾಯಗೊಂಡಿದ್ದಾರೆ.
We pay rich #tributes to our colleague #Martyr #DySP Aman Kumar for his supreme sacrifice made in the line of #duty today at @Kulgam. We stand by his family at this crucial moment. RIP. @JmuKmrPolice @policekulgam pic.twitter.com/vgEKkgp6mm
— Kashmir Zone Police (@KashmirPolice) February 24, 2019
ಕಾರ್ಯಾಚರಣೆಯಲ್ಲಿ ಪೊಲೀಸರ ತಂಡವನ್ನು ಮುನ್ನಡೆಸುತ್ತಿದ್ದ ಡಿಎಸ್ಪಿ ಅಮನ್ ಕುಮಾರ್ ಥಾಕೂರ್ ಅವರು ಗುಂಡಿನ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ. 2011 ಬ್ಯಾಚ್ನ ಅಧಿಕಾರಿಯಾಗಿರುವ ಇವರು ಕಳೆದ ಎರಡು ವರ್ಷಗಳಿಂದ ಕುಲ್ಗಾಮ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಉಗ್ರರ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಕ್ಷಿಣ ಕಾಶ್ಮೀರದ ಕುಲ್ಗಾಮ್ನ ತುರಿಗಂನಲ್ಲಿ ಭದ್ರತಾ ಪಡೆ ಕಾರ್ಯಾಚರಣೆ ನಡೆಸಿತ್ತು. ಈ ಸಂದರ್ಭ ಉಗ್ರರು ಗುಂಡಿನ ದಾಳಿ ನಡೆಸಿದ್ದು ಸೇನೆ ಪ್ರತಿದಾಳಿ ನಡೆಸಿದೆ.