Wednesday, September 18, 2024

ಪುಲ್ವಾಮಾದಲ್ಲಿ ಮೂವರು ಉಗ್ರರು ಉಡೀಸ್..!

ಶ್ರೀನಗರ: ಜಮ್ಮುಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೇನೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಹಿರಿಯ ಪೊಲೀಸ್​ ಅಧಿಕಾರಿ ಹುತಾತ್ಮರಾಗಿದ್ದಾರೆ. ಪೊಲೀಸ್​ ಹಾಗೂ ಕೇಂದ್ರ ಮೀಸಲು ಪೊಲೀಸ್​ ಪಡೆ, ಸೇನೆ ಕಾರ್ಯಾಚರಣೆ ನಡೆಸಿದ್ದು ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ 3 ಯೋಧರು ಗಾಯಗೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಪೊಲೀಸರ ತಂಡವನ್ನು ಮುನ್ನಡೆಸುತ್ತಿದ್ದ  ಡಿಎಸ್​ಪಿ ಅಮನ್​ ಕುಮಾರ್ ಥಾಕೂರ್ ಅವರು ಗುಂಡಿನ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ. 2011 ಬ್ಯಾಚ್​ನ ಅಧಿಕಾರಿಯಾಗಿರುವ ಇವರು ಕಳೆದ ಎರಡು ವರ್ಷಗಳಿಂದ ಕುಲ್ಗಾಮ್​ನಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಉಗ್ರರ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಕ್ಷಿಣ ಕಾಶ್ಮೀರದ ಕುಲ್ಗಾಮ್​ನ ತುರಿಗಂನಲ್ಲಿ ಭದ್ರತಾ ಪಡೆ ಕಾರ್ಯಾಚರಣೆ ನಡೆಸಿತ್ತು. ಈ ಸಂದರ್ಭ ಉಗ್ರರು ಗುಂಡಿನ ದಾಳಿ ನಡೆಸಿದ್ದು ಸೇನೆ ಪ್ರತಿದಾಳಿ ನಡೆಸಿದೆ.

RELATED ARTICLES

Related Articles

TRENDING ARTICLES