ನವದೆಹಲಿ : ಪಾಕಿಸ್ತಾನದ ಯುದ್ಧ ವಿಮಾನ ಎಫ್-16 ಹೊಡೆದುರುಳಿಸಿದ ಬಗ್ಗೆ ತಮಗೆ ಮಾಹಿತಿ ನೀಡಬೇಕಿತ್ತು ಅಂತ ಕೇಂದ್ರಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.
ದೆಹಲಿಯಲ್ಲಿ ನಡೆದ 21 ರಾಜಕೀಯ ಪಕ್ಷಗಳ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗಾಂಧಿ ಕೇಂದ್ರ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು.
‘ಎಫ್-16 ಹೊಡೆದುರುಳಿಸಿದ ಬಗ್ಗೆ ಮಾಹಿತಿ ನೀಡ್ಬೇಕಿತ್ತು. ಪ್ರಧಾನಿ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಸಬೇಕಿತ್ತು. ಸೇನಾಶಕ್ತಿಯನ್ನು ರಾಜಕೀಯಕ್ಕಾಗಿ ಬಳಸುತ್ತಿದ್ದಾರೆ. ಯೋಧರ ತ್ಯಾಗವನ್ನ ರಾಜಕೀಯಕ್ಕೆ ಬಳಸುತ್ತಿದ್ದಾರೆ’ ಎಂದು ಟೀಕಿಸಿದರು.
ದಾಳಿ ಬಗ್ಗೆ ಮಾಹಿತಿ ನೀಡ್ಬೇಕಿತ್ತಂತೆ : ಪ್ರಧಾನಿ ವಿರುದ್ಧ ರಾಹುಲ್ ವಾಗ್ದಾಳಿ
TRENDING ARTICLES