Wednesday, January 22, 2025

ತಂದೆಯ ಪರ ಸಂಸದ ಬಿ.ವೈ ರಾಘವೇಂದ್ರ ಬ್ಯಾಟಿಂಗ್​

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರ ಪರ ಅವರ ಪುತ್ರ, ಸಂಸದ ಬಿ.ವೈ ರಾಘವೇಂದ್ರ ಬ್ಯಾಟಿಂಗ್ ನಡೆಸಿದ್ದಾರೆ.
‘ಉಗ್ರರ ನೆಲೆಗಳನ್ನು ನಾಶ ಮಾಡಿರುವುದರಿಂದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 22 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ’ ಎಂದು ಬಿಎಸ್​ವೈ ನೀಡಿದ್ದ ಹೇಳಿಕೆಗೆ ಎಲ್ಲೆಡೆ ಟೀಕೆ ವ್ಯಕ್ತವಾಗುತ್ತಿದೆ. ಯಡಿಯೂರಪ್ಪ ತನ್ನ ಹೇಳಿಕೆಯನ್ನು ತಿರುಚಲಾಗಿದೆ ಅಂತ ಹೇಳಿದ್ದಾರೆ. ಒಂದಿಷ್ಟು ಮಂದಿ ಯಡಿಯೂರಪ್ಪ ಅವರ ಪರ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಇದೀಗ ಅವರ ಪುತ್ರ, ಸಂಸದ ಬಿ.ವೈ ರಾಘವೇಂದ್ರ ಅವರ ಸರದಿ!
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿವೈರ್, ತಂದೆಯ ಪರ ಬ್ಯಾಟಿಂಗ್ ಮಾಡಿದ್ದಾರೆ. ”ಪಾಕಿಸ್ತಾನದ ವಿರುದ್ಧದ ಕ್ರಮ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಯಾವುದೇ ರಾಜಕೀಯ ಉದ್ದೇಶ, ಲಾಭಕ್ಕಾಗಿ ಯಡಿಯೂರಪ್ಪ ಅವರು ಈ ಹೇಳಿಕೆ ನೀಡಿಲ್ಲ. ಪ್ರಧಾನಿ ಮೋದಿ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನುವುದನ್ನು ಹೇಳುವುದಷ್ಟೇ ಅವರ ಉದ್ದೇಶವಾಗಿತ್ತು” ಎಂದು ಪ್ರತಿಕ್ರಿಯೆ ನೀಡಿದರು.

RELATED ARTICLES

Related Articles

TRENDING ARTICLES