ಸಕ್ಕರೆನಾಡು ಮಂಡ್ಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಲೋಕಸಭಾ ಚುನಾವಣೆಗೆ ಮಂಡ್ಯದಿಂದ ಸ್ಪರ್ಧಿಸಲು ತಯಾರಿ ಮಾಡಿಕೊಳ್ಳುತ್ತಿರುವ ಸುಮಲತಾ ಇಂದು ಮೈಸೂರು ಜಿಲ್ಲೆಯಲ್ಲಿ ರೌಂಡ್ಸ್ ಹಾಕಿದ್ರು. ಅಲ್ಲದೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ್ರು… ಇದು ರಾಜಕೀಯ ವಲಯದಲ್ಲೂ ಸಾಕಷ್ಟು ಕುತೂಹಲ ಮೂಡಿಸಿದೆ.
ಲೋಕಸಭಾ ಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲ. ಆಗಲೇ ಮಂಡ್ಯ ಕ್ಷೇತ್ರದಲ್ಲಿ ಕುತೂಹಲ ಹೆಚ್ಚಾಗಿದೆ. ಕಾರಣ ಮಂಡ್ಯದ ಗಂಡು ಅಂಬರೀಶ್ ಪತ್ನಿ ಸುಮಲತಾ ಆಕಾಂಕ್ಷಿಯಾಗಿರೋದು. ಹೌದು ಮಂಡ್ಯದಲ್ಲಿ ರಾಜಕೀಯ ನೆಲೆ ಕಂಡುಕೊಳ್ಳಲು ಕಸರತ್ತು ನಡೆಸುತ್ತಿರುವ ಸುಮಲತಾಗೆ ಇವರೆಗೂ ಕಾಂಗ್ರೆಸ್ ನಾಯಕರು ಟಿಕೆಟ್ ನೀಡುವ ಭರವಸೆ ನೀಡಿಲ್ಲ. ಆದ್ರೂ ಸುಮಲತಾ ಅಂಬರೀಶ್ ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಾ ಜನಾಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಹೀಗಾಗಿ ಇಂದು ಸುತ್ತೂರು ಮಠಕ್ಕೆ ಭೇಟಿ ನೀಡಿ, ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಯವರ ಆಶೀರ್ವಾದ ಪಡೆದರು. ನಂತರ ಮಹದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದ್ರು.
ಮಂಡ್ಯ ಕ್ಷೇತ್ರಕ್ಕೆ ಜೆಡಿಎಸ್ ಪಕ್ಷವು ಸುಮಲತಾರನ್ನ ಸೆಳೆಯುತ್ತಿದೆ ಎಂಬ ಊಹಾಪೋಹಕ್ಕೆ ಪ್ರತಿಕ್ರಿಯಿಸಿದ ಸುಮಲತಾ, ಅದು ಸತ್ಯಕ್ಕೆ ದೂರುವಾದ ಮಾತು. ಈ ಕುರಿತು ಜೆಡಿಎಸ್ ನಾಯಕರು ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟ ಪಡಿಸಿದ್ರು.
ಸುಮಲತಾ ಅಂಬರೀಶ್ಗೆ ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ ಸೇರಿ ಹಲವರು ಸಾಥ್ ನೀಡಿದ್ರು. ಬಳಿಕ ಮಾತನಾಡಿದ ರಾಕ್ಲೈನ್ ಮಂಡ್ಯ ಜನರ ಋಣ ತೀರಿಸಲು ಸುಮಲತಾ ಅಬರೀಶ್ ಅವರು ರಾಜಕೀಯಕ್ಕೆ ಬಂದಿದ್ದಾರೆ. ಅವರ ಬಗ್ಗೆ ಅಪಪ್ರಚಾರ ಮಾಡೋದು ಸರಿಯಲ್ಲ ಎಂದ್ರು.
ಈ ಎಲ್ಲಾ ರಾಜಕೀಯ ಬೆಳವಣಿಗೆಗಳ ಮಧ್ಯೆ, ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸುತ್ತಿದ್ದಾರೆ. ನಿನ್ನೆ ಮೈಸೂರಿನಲ್ಲಿ ನಡೆದ ಮುಖ್ಯಮಂತ್ರಿಗಳ ಅಭಿನಂದನಾ ಸಮಾರಂಭದಲ್ಲಿ ತಂದೆಯ ಎದುರು ಬಹಿರಂಗವಾಗಿ ತಮ್ಮನ್ನ ಮುಂಬರುವ ಲೋಕಸಭಾ ಚುನಾವಣೆಗೆ ಪರಿಗಣಿಸುವಂತೆ ನಿಖಿಲ್ ಮನವಿ ಮಾಡಿದ್ರು. ಹೀಗಾಗಿ ನಿಖಿಲ್ ರಾಜಕೀಯ ಎಂಟ್ರಿ ಸುಮಲತಾ ಅಂಬರೀಶ್ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಒಂದು ವೇಳೆ ಮಂಡ್ಯದಲ್ಲಿ ನಿಖಿಲ್ ಕುಮಾರ್ ಸ್ವಾಮಿ ಸ್ಪರ್ಧೆ ಮಾಡಿದ್ರೆ, ಕುಮಾರಸ್ವಾಮಿ ವರ್ಸಸ್ ಸುಮಲತಾ ಅಂತಾನೇ ನಡೆಯೋ ಸಾಧ್ಯತೆಯಿದೆ.
-ಟಿ.ಎನ್.ಕೃಷ್ಣಕುಮಾರ್, ಮೈಸೂರು
ಮಂಡ್ಯದಲ್ಲಿ ಸುಮಲತಾ – ನಿಖಿಲ್ ಫೈಟ್ ಫಿಕ್ಸ್..?
RELATED ARTICLES
Recent Comments
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


