ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧೆ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಅವರು ಮೌನವಹಿಸಿದ್ದಾರೆ.
ಕುಮಾರಕೃಪ ಗೆಸ್ಟ್ ಹೌಸ್ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಮನ್ವಯ ಸಮಿತಿ ಸಭೆಯಲ್ಲಿ ಸೀಟು ಹಂಚಿಕೆ ಬಗ್ಗೆ ಚರ್ಚೆಯಾಗಿದೆ. ಇನ್ನೆರಡು ದಿನಗಳಲ್ಲಿ ಸೀಟು ಹಂಚಿಕೆಯಾಗಲಿದೆ. ಜೆಡಿಎಸ್ 12 ಸೀಟು ಕೇಳಿರೋದ್ರಲ್ಲಿ ತಪ್ಪಿಲ್ಲ. ಅಂತಿಮವಾಗಿ ಎಲ್ಲರೂ ಕುಳಿತು ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು. ಆದರೆ, ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಸ್ಪರ್ಧೆ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆಗೆ ನಿರಾಕರಿಸಿದ್ರು.
ಸುಮಲತಾ ಅಂಬರೀಶ್ ಸ್ಪರ್ಧೆ ಬಗ್ಗೆ ವೇಣುಗೋಪಾಲ್ ಮೌನ..!
TRENDING ARTICLES