ಗದಗ : ಲೋಕಸಭೆ ಚುನಾವಣೆ ಬಳಿಕ ಸರ್ಕಾರ ಪತನಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ.
ಗದಗದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನ 20 ಶಾಸಕರು ಕುಮಾರಸ್ವಾಮಿ ಅವರನ್ನು ಸಿಎಂ ಎಂದು ಒಪ್ಪುತ್ತಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಸಾಕಷ್ಟು ಗೊಂದಲಗಳಿವೆ. ಹೀಗಾಗಿ ಲೋಕಸಭೆ ಚುನಾವಣೆ ಬಳಿಕ ಸರ್ಕಾರ ಉಳಿಯಲ್ಲ, ಪತನವಾಗುತ್ತೆ ಎಂದರು.