ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬಿಜೆಪಿ ಟಿಕೆಟ್ ಹಂಚಿಕೆ ಚರ್ಚೆ ನಡೆಯಲಿದೆ. ಕಳೆದ ರಾತ್ರಿಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ದೆಹಲಿಗೆ ತೆರಳಿದ್ದಾರೆ. ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಜೊತೆ ಮಾತುಕತೆ ನಡೆಸಲಿದ್ದಾರೆ.
ಕ್ಷೇತ್ರಗಳ ವಿವರ, ಪ್ರಬಲ ಅಭ್ಯರ್ಥಿಗಳ ಪಟ್ಟಿ ಜೊತೆಗೆ ದೆಹಲಿಗೆ ತೆರಳಿರೋ ಬಿಎಸ್ವೈ ಹೆಚ್ಚು ಕ್ಷೇತ್ರ ಗೆಲ್ಲುವ ಲೆಕ್ಕಾಚಾರಗಳ ಬಗ್ಗೆ ಅಮಿತ್ ಶಾ ಜೊತೆ ಚರ್ಚೆ ಮಾಡಲಿದ್ದಾರೆ. ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮ ಮಾಡ್ಕೊಂಡೇ ಬರೋ ಸಾಧ್ಯತೆ ಹೆಚ್ಚಿದೆ.