ಬೆಂಗಳೂರು : ಲೋಕಸಭಾ ಚುನಾವಣೆ ಡೇಟ್ ಅನೌನ್ಸ್ ಆಗಿದ್ದು, ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುವುದು ಇನ್ನೂ ಬಾಕಿ ಇದೆ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ದಿ. ಅನಂತ್ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ಕುಮಾರ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ಕನ್ಫರ್ಮ್ ಆಗಿದೆ.
ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ತೇಜಸ್ವಿನಿ ಅನಂತ್ಕುಮಾರ್ ಅವರ ಹೆಸರನ್ನು ಫೈನಲ್ ಮಾಡಲಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಅಧಿಕೃತವಾಗಿ ಘೋಷಿಸುವುದು ಬಾಕಿ ಇದೆ. ಅಶೋಕ್ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಉದಯ್ ಗರುಡಾಚಾರ್,ರವಿಸುಬ್ರಹ್ಮಣ್ಯ , ಸತೀಶ್ ರೆಡ್ಡಿ, ವಿ.ಸೋಮಣ್ಣ ಭಾಗಿಯಾಗಿದ್ದರು.
ಬೆಂಗಳೂರು ದಕ್ಷಿಣದಿಂದ ತೇಜಸ್ವಿನಿ ಅನಂತ್ಕುಮಾರ್ ಸ್ಪರ್ಧೆ ಕನ್ಫರ್ಮ್
TRENDING ARTICLES