Monday, December 9, 2024

ದೆಹಲಿ ಕದ ತಟ್ಟಿದ ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿಗಳು..!

ದೆಹಲಿ: ಕಾಂಗ್ರೆಸ್​ ಸ್ಕ್ರೀನಿಂಗ್ ಕಮಿಟಿ ಮೀಟಿಂಗ್ ದೆಹಲಿಯಲ್ಲಿ ನಡೆದಿದ್ದು ಹಾಲಿ ಸಂಸದರಿರುವ ಕ್ಷೇತ್ರಗಳನ್ನ ಬಿಟ್ಟುಕೊಡದಿರಲು ಕಾಂಗ್ರೆಸ್ ತೀರ್ಮಾನ ಮಾಡಿರೋ ಬಗ್ಗೆ ಸಿದ್ದರಾಮಯ್ಯ ಅವರು ಸುಳಿವು ನೀಡಿದ್ದಾರೆ. ರಾಹುಲ್ ಗಾಂಧಿಗೆ ಈ ಬಗ್ಗೆ ಮನದಟ್ಟು ಮಾಡಿಕೊಟ್ಟಿರುವ ಸಿದ್ದು, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಕ್ಷೇತ್ರ ಬಿಟ್ಟುಕೊಡದಿರಲು ತೀರ್ಮಾನ ಮಾಡಲಾಗಿದೆ ಅಂತ ಹೇಳಿದ್ದಾರೆ. ಕಾಂಗ್ರೆಸ್ ಸಂಸದರು ಇರುವ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿರುವ ಜೆಡಿಎಸ್ ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಕ್ಷೇತ್ರಗಳನ್ನ ಬಿಟ್ಟುಕೊಡುವಂತೆ ಕೇಳಿದೆ.

ಬೆಂಗಳೂರು ಸೆಂಟ್ರಲ್ ಟಿಕೆಟ್​ಗಾಗಿ ರೋಷನ್ ಬೇಗ್ ಲಾಬಿ ಮಾಡ್ತಿದ್ದಾರೆ. ಧಾರವಾಡ ಕ್ಷೇತ್ರದ ಟಿಕೆಟ್​ಗಾಗಿ ಶಾಕಿರ್ ಸನದಿ ಬೇಡಿಕೆ ಇಟ್ಟಿದ್ದಾರೆ. ಬಾಗಲಕೋಟೆ ಕ್ಷೇತ್ರಕ್ಕಾಗಿ ವೀಣಾ ಕಾಶಪ್ಪನವರ್ ಹಾಗೂ ಶಿವಮೂರ್ತಿ ನಾಯ್ಕ್​​​ ಚಿತ್ರದುರ್ಗ ಕ್ಷೇತ್ರಕ್ಕೆ ಬೇಡಿಕೆ ಇಟ್ಟಿದ್ದಾರೆ. “ತುಮಕೂರು ಕ್ಷೇತ್ರ ಬಿಟ್ಟು ಕೊಡುವಂತೆ ಜೆಡಿಎಸ್ ಬೇಡಿಕೆ ಇಟ್ಟಿರುವುದು ನನಗೆ ಗೊತ್ತಿಲ್ಲ. ದೇವೆಗೌಡರು ಸ್ಪರ್ಧೆ ಮಾಡುವುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ ಇದೆಲ್ಲಾ ಊಹಾಪೋಹ. ತುಮಕೂರು ಬಿಟ್ಟು ಕೊಡುವ ಕುರಿತ ಚರ್ಚೆ ಹೈಕಮಾಂಡ್ ಗೆ ಬಿಟ್ಟ ವಿಚಾರ ಅಂತಾ” ದೆಹಲಿಯಲ್ಲಿ ಸಂಸದ ಮುದ್ದಹನುಮೇಗೌಡ ಪವರ್ ಟಿವಿ ಜೊತೆ ಅಭಿಪ್ರಾಯ ಹಂಚಿಕೊಂಡಿದ್ದಾರೆ.

“ರಾಯಚೂರು ಕ್ಷೇತ್ರಕ್ಕೆ ಜೆಡಿಎಸ್ ಬೇಡಿಕೆ ಇಟ್ಟಿದೆ. ಈ ಬಗ್ಗೆ ಪಕ್ಷದ ತೀರ್ಮಾನ ಅಂತಿಮವಾಗಿರುತ್ತದೆ. ನಮ್ಮ ಅಭಿಪ್ರಾಯವನ್ನ ಪಕ್ಷಕ್ಕೆ ತಿಳಿಸುತ್ತೇವೆ. ಹೊಂದಾಣಿಕೆ ಬಳಿಕ ಸೀಟು ಹಂಚಿಕೆಯಾಗುತ್ತದೆ. ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿರುತ್ತೇವೆ” ಅಂತ ದೆಹಲಿಯಲ್ಲಿ ರಾಯಚೂರು ಸಂಸದ ಬಿ.ವಿ. ನಾಯಕ್ ಹೇಳಿದ್ದಾರೆ.

RELATED ARTICLES

Related Articles

TRENDING ARTICLES