ನವದೆಹಲಿ : ತುಮಕೂರು ಹೊರತು ಪಡಿಸಿ ಉಳಿದೆಲ್ಲಾ ಕಾಂಗ್ರೆಸ್ ಸಂಸದರಿಗೆ ಟಿಕೆಟ್ ಪಕ್ಕಾ ಆಗಿದೆ. ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ತಮ್ಮ ಕ್ಷೇತ್ರಗಳಲ್ಲಿ ಕೆಲಸ ಆರಂಭಿಸಲು ಸಂಸದರಿಗೆ ಸಂದೇಶ ರವಾನಿಸಲಾಗಿದೆ.
7 ಕ್ಷೇತ್ರಗಳನ್ನು ಜೆಡಿಎಸ್ಗೆ ಬಿಟ್ಟು ಕೊಡುವ ಬಗ್ಗೆ ಕಾಂಗ್ರೆಸ್ ಚರ್ಚೆ ನಡೆಸಿದೆ. ಮೈಸೂರು ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡಲು ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ಇನ್ನೂ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ.
ತುಮಕೂರು ಹೊರತುಪಡಿಸಿದರೆ ಚಿಕ್ಕೋಡಿ, ಕಲಬುರಗಿ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳಲ್ಲಿ ಹಾಲಿ ಕಾಂಗ್ರೆಸ್ ಸಂಸದರಿದ್ದು, ಅವರಿಗೆಲ್ಲಾ ಟಿಕೆಟ್ ಕನ್ಫರ್ಮ್ ಆಗಿದೆ. ತುಮಕೂರು ಎಂಪಿ ಎಸ್.ಪಿ ಮುದ್ದಹನುಮೇಗೌಡ ಮಾತ್ರ ಇನ್ನೂ ಟಿಕೆಟ್ ಪಕ್ಕಾ ಆಗಿಲ್ಲ. ಮಾರ್ಚ್ 16ಕ್ಕೆ ಮೊದಲ ಹಂತದ ಕ್ಷೇತ್ರಗಳ ಪಟ್ಟಿ, 2ನೇ ಹಂತದ ಪಟ್ಟಿ ಮಾರ್ಚ್ 19ರಂದು ಬಿಡುಗಡೆಯಾಗಲಿದೆ.
ತುಮಕೂರು ಬಿಟ್ಟು ಹಾಲಿ ಸಂಸದರಿಗೆ ಟಿಕೆಟ್ ಪಕ್ಕಾ..!
TRENDING ARTICLES