ಲೋಕಸಭಾ ಚುನಾವಣೆ ಡೇಟ್ ಅನೌನ್ಸ್ ಆಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಆಘಾತಕ್ಕೆ ಒಳಗಾಗುತ್ತಿದೆ. ಒಂದರ ಮೇಲೊಂದು ಪೆಟ್ಟು ಕಾಂಗ್ರೆಸ್ಗೆ ಬೀಳುತ್ತಿದೆ. ರಾಜ್ಯದಲ್ಲಿ ಇತ್ತೀಚೆಗಷ್ಟೇ ಉಮೇಶ್ ಜಾಧವ್ ರಾಜೀನಾಮೆ ನೀಡಿ ಬಿಜೆಪಿ ಸೇರಿರೋದು ಗೊತ್ತೇ ಇದೆ. ಈ ರಾಜೀನಾಮೆ ಕಥೆ ಬರೀ ರಾಜ್ಯದಲ್ಲಿ ಮಾತ್ರವಲ್ಲ, ಇಡೀ ದೇಶದಲ್ಲೇ ಕಾಂಗ್ರೆಸ್ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ನ ಪ್ರಮುಖರು ಬಿಜೆಪಿ ಸೇರುತ್ತಿದ್ದಾರೆ. ಅಸ್ಸಾಂ ಕಾಂಗ್ರೆಸ್ ಮುಖಂಡ ಗೌತಮ್ ರಾಯ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಗುಜರಾತಿನಲ್ಲಿ ನಾಲ್ವರು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯ ಪ್ರತಿಪಕ್ಷ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್ ಅವರ ಪುತ್ರ ಸುಜಯ್ ವಿಖೆ ಪಾಟೀಲ್ ಕೂಡ ಬಿಜೆಪಿ ಸೇರಿದ್ದಾರೆ.
ಇದೀಗ ಮಹಾರಾಷ್ಟ್ರದ ಕಾಂಗ್ರೆಸ್ಗೆ ಮತ್ತೊಂದು ಹೊಡೆತ ಬಿದ್ದಿದೆ. 7 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಹಿರಿಯ ನಾಯಕ ಕಾಳಿದಾಸ್ ಕೊಲಂಬಕರ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಲು ರೆಡಿಯಾಗಿದ್ದಾರೆ ಎಂದು ವರದಿಯಾಗಿದೆ. ಅವರು ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ ನಿಕಟವರ್ತಿಯಾಗಿದ್ದಾರೆ.
7 ಬಾರಿ ಗೆದ್ದ ಕಾಂಗ್ರೆಸ್ ಶಾಸಕ ಬಿಜೆಪಿಗೆ -ದೇಶಾದ್ಯಂತ ಕಾಂಗ್ರೆಸ್ಗೆ ಆಘಾತ.!
TRENDING ARTICLES