Monday, June 24, 2024

7 ಬಾರಿ ಗೆದ್ದ ಕಾಂಗ್ರೆಸ್ ಶಾಸಕ ಬಿಜೆಪಿಗೆ -ದೇಶಾದ್ಯಂತ ಕಾಂಗ್ರೆಸ್​ಗೆ ಆಘಾತ.!

ಲೋಕಸಭಾ ಚುನಾವಣೆ ಡೇಟ್​ ಅನೌನ್ಸ್ ಆಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್​ ಆಘಾತಕ್ಕೆ ಒಳಗಾಗುತ್ತಿದೆ. ಒಂದರ ಮೇಲೊಂದು ಪೆಟ್ಟು ಕಾಂಗ್ರೆಸ್​ಗೆ ಬೀಳುತ್ತಿದೆ. ರಾಜ್ಯದಲ್ಲಿ ಇತ್ತೀಚೆಗಷ್ಟೇ ಉಮೇಶ್ ಜಾಧವ್ ರಾಜೀನಾಮೆ ನೀಡಿ ಬಿಜೆಪಿ ಸೇರಿರೋದು ಗೊತ್ತೇ ಇದೆ. ಈ ರಾಜೀನಾಮೆ ಕಥೆ ಬರೀ ರಾಜ್ಯದಲ್ಲಿ ಮಾತ್ರವಲ್ಲ, ಇಡೀ ದೇಶದಲ್ಲೇ ಕಾಂಗ್ರೆಸ್​ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಹಲವು ರಾಜ್ಯಗಳಲ್ಲಿ ಕಾಂಗ್ರೆಸ್​ನ ಪ್ರಮುಖರು ಬಿಜೆಪಿ ಸೇರುತ್ತಿದ್ದಾರೆ. ಅಸ್ಸಾಂ ಕಾಂಗ್ರೆಸ್ ಮುಖಂಡ ಗೌತಮ್​ ರಾಯ್​ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಗುಜರಾತಿನಲ್ಲಿ ನಾಲ್ವರು ಕಾಂಗ್ರೆಸ್​ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯ ಪ್ರತಿಪಕ್ಷ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್​ ಅವರ ಪುತ್ರ ಸುಜಯ್​ ವಿಖೆ ಪಾಟೀಲ್​ ಕೂಡ ಬಿಜೆಪಿ ಸೇರಿದ್ದಾರೆ.
ಇದೀಗ ಮಹಾರಾಷ್ಟ್ರದ ಕಾಂಗ್ರೆಸ್​ಗೆ ಮತ್ತೊಂದು ಹೊಡೆತ ಬಿದ್ದಿದೆ. 7 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಹಿರಿಯ ನಾಯಕ ಕಾಳಿದಾಸ್​ ಕೊಲಂಬಕರ್​ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಲು ರೆಡಿಯಾಗಿದ್ದಾರೆ ಎಂದು ವರದಿಯಾಗಿದೆ. ಅವರು ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ ನಿಕಟವರ್ತಿಯಾಗಿದ್ದಾರೆ.

RELATED ARTICLES

Related Articles

TRENDING ARTICLES