Wednesday, January 22, 2025

ಸುಮಲತಾಗೆ ಮಂಡ್ಯದಲ್ಲಿ ಅವಕಾಶ ನೀಡಲು ಸಾಧ್ಯವೇ ಇಲ್ಲ : ದಿನೇಶ್​ ಗುಂಡೂರಾವ್

ಬೆಂಗಳೂರು : ಮಂಡ್ಯ ಲೋಕಸಭಾ ಚುನಾವಣಾ ಕಣ ರಂಗೇರಿದೆ. ಮೈತ್ರಿ ಅಭ್ಯರ್ಥಿಯಾಗಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್​ ಕಣಕ್ಕಿಳಿಯೋದು ಖಚಿತವಾಗಿದೆ. ಆದರೂ, ಕೊನೆ ಕ್ಷಣದಲ್ಲಾದರೂ ಕಾಂಗ್ರೆಸ್​​​ನಿಂದ ಸುಮಲತಾ ಅವರಿಗೆ ಟಿಕೆಟ್​ ಸಿಗಬಹುದು ಅನ್ನೋ ಅಭಿಪ್ರಾಯ ಕೇಳಿಬಂದಿತ್ತು. ಆದರೆ, ಇದೀಗ ಅವರಿಗೆ ಕಾಂಗ್ರೆಸ್​ ಟಿಕೆಟ್​ ಸಿಗಲ್ಲ ಅನ್ನೋದು ಪಕ್ಕಾ ಆಗಿದೆ.
ಬೆಂಗಳೂರಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​, ‘ಸುಮಲತಾ ಅವರಿಗೆ ರಾಜಕೀಯವಾಗಿ ಬೆಳೆಯಲು ಖಂಡಿತ ಅವಕಾಶವಿದೆ. ಆದರೆ ಈ ಬಾರಿ ಮಂಡ್ಯದಲ್ಲಿ ಅವರಿಗೆ ಅವಕಾಶ ಕೊಡಲು ಸಾಧ್ಯವಿಲ್ಲ’ ಎಂದು ಸ್ಪಷ್ಟಪಡಿಸಿದ್ರು.
ತುಮಕೂರು ಸೇರಿ ಯಾವ್ದೇ ಹಾಲಿ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟು ಕೊಡಲ್ಲ. ಪಕ್ಷದಲ್ಲೇ ಈ ಬಗ್ಗೆ ತೀರ್ಮಾನ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ರು.

RELATED ARTICLES

Related Articles

TRENDING ARTICLES