ಬೆಂಗಳೂರು : ಕೊನೆಗೂ ದೋಸ್ತಿ ಹಗ್ಗಜಗ್ಗಾಟಕ್ಕೆ ತೆರೆ ಬಿದ್ದಿದೆ. ಲೋಕಸಭಾ ಸೀಟು ಹಂಚಿಕೆ ಬಿಕ್ಕಟ್ಟು ಅಂತ್ಯವಾಗಿದ್ದು, ಮೈಸೂರು ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್ ಸಫಲವಾಗಿದೆ. ಆದರೆ, ಹಾಲಿ ಸಂಸದರಿರುವ ತುಮಕೂರನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದೆ.
ಜೆಡಿಎಸ್ 12 ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿತ್ತು. 8 ಕ್ಷೇತ್ರವನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ. ಮೈಸೂರನ್ನು ಉಳಿಸಿಕೊಳ್ಳುವಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಶಸ್ವಿಯಾಗಿದ್ದಾರೆ.
ತುಮಕೂರು, ಹಾಸನ, ಮಂಡ್ಯ, ಶಿವಮೊಗ್ಗ, ಉತ್ತರ ಕನ್ನಡ, ಬೆಂಗಳೂರು ಉತ್ತರ, ವಿಜಯಪುರ ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್ಗೆ ಕಾಂಗ್ರೆಸ್ ಬಿಟ್ಟುಕೊಟ್ಟಿದೆ. ತುಮಕೂರುನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದ್ದು ಹಾಲಿ ಸಂಸದ ಎಸ್.ಪಿ ಮುದ್ದಹನುಮೇಗೌಡರಿಗೆ ಶಾಕ್ ಆಗಿದೆ. ಚಿಕ್ಕಬಳ್ಳಾಪುರವನ್ನು ಉಳಿಸಿಕೊಳ್ಳುವಲ್ಲಿ ವೀರಪ್ಪ ಮೊಯ್ಲಿ, ಕೋಲಾರವನ್ನು ಉಳಿಸಿಕೊಳ್ಳುವಲ್ಲಿ ಮುನಿಯಪ್ಪ ಅವರು ಯಶಸ್ವಿಯಾಗಿದ್ದಾರೆ.
ಕೇರಳದ ಕೊಚ್ಚಿನ್ನಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಜೆಡಿಎಸ್ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ನಡುವೆ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಮೈಸೂರು ಉಳಿಸಿಕೊಂಡು ತುಮಕೂರನ್ನು ಜೆಡಿಎಸ್ಗೆ ಬಿಟ್ಟು ಕೊಟ್ಟ ಕಾಂಗ್ರೆಸ್..!
TRENDING ARTICLES