Friday, September 13, 2024

ಮೈಸೂರು ಉಳಿಸಿಕೊಂಡು ತುಮಕೂರನ್ನು ಜೆಡಿಎಸ್​ಗೆ ಬಿಟ್ಟು ಕೊಟ್ಟ ಕಾಂಗ್ರೆಸ್​..!

ಬೆಂಗಳೂರು : ಕೊನೆಗೂ ದೋಸ್ತಿ ಹಗ್ಗಜಗ್ಗಾಟಕ್ಕೆ ತೆರೆ ಬಿದ್ದಿದೆ. ಲೋಕಸಭಾ ಸೀಟು ಹಂಚಿಕೆ ಬಿಕ್ಕಟ್ಟು ಅಂತ್ಯವಾಗಿದ್ದು, ಮೈಸೂರು ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್​ ಸಫಲವಾಗಿದೆ. ಆದರೆ, ಹಾಲಿ ಸಂಸದರಿರುವ ತುಮಕೂರನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟಿದೆ.
ಜೆಡಿಎಸ್​ 12 ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿತ್ತು. 8 ಕ್ಷೇತ್ರವನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ. ಮೈಸೂರನ್ನು ಉಳಿಸಿಕೊಳ್ಳುವಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಶಸ್ವಿಯಾಗಿದ್ದಾರೆ.
ತುಮಕೂರು, ಹಾಸನ, ಮಂಡ್ಯ, ಶಿವಮೊಗ್ಗ, ಉತ್ತರ ಕನ್ನಡ, ಬೆಂಗಳೂರು ಉತ್ತರ, ವಿಜಯಪುರ ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್​ಗೆ ಕಾಂಗ್ರೆಸ್ ಬಿಟ್ಟುಕೊಟ್ಟಿದೆ. ತುಮಕೂರುನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟಿದ್ದು ಹಾಲಿ ಸಂಸದ ಎಸ್​.ಪಿ ಮುದ್ದಹನುಮೇಗೌಡರಿಗೆ ಶಾಕ್ ಆಗಿದೆ.  ಚಿಕ್ಕಬಳ್ಳಾಪುರವನ್ನು ಉಳಿಸಿಕೊಳ್ಳುವಲ್ಲಿ ವೀರಪ್ಪ ಮೊಯ್ಲಿ, ಕೋಲಾರವನ್ನು ಉಳಿಸಿಕೊಳ್ಳುವಲ್ಲಿ ಮುನಿಯಪ್ಪ ಅವರು ಯಶಸ್ವಿಯಾಗಿದ್ದಾರೆ. 
ಕೇರಳದ ಕೊಚ್ಚಿನ್​ನಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ, ಜೆಡಿಎಸ್​ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ನಡುವೆ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

RELATED ARTICLES

Related Articles

TRENDING ARTICLES