Monday, December 23, 2024

ಶೋಭಾ ಕರಂದ್ಲಾಜೆ ಬದಲಿಗೆ ಜಯಪ್ರಕಾಶ್​ ಹೆಗ್ಡೆಗೆ ಟಿಕೆಟ್​ ನೀಡುವಂತೆ ಆಗ್ರಹ..!

ಉಡುಪಿ : ಸಂಸದೆ ಶೋಭಾ ಕರಂದ್ಲಾಜೆ ಅವರ ಸ್ಪರ್ಧೆಗೆ ಸ್ವಪಕ್ಷದಿಂದಲೇ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಶೋಭಾ ಕರಂದ್ಲಾಜೆ ಬದಲಿಗೆ ಮಾಜಿ ಸಂಸದ ಜಯಪ್ರಕಾಶ್​ ಹೆಗ್ಡೆ ಅವರಿಗೆ ಟಿಕೆಟ್​ ನೀಡುವಂತೆ ಬಿಜೆಪಿಯ ಕೆಲವು ಕಾರ್ಯಕರ್ತರು ಆಗ್ರಹಿಸುತ್ತಿದ್ದಾರೆ.
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ಕಾರ್ಯಕರ್ತರು, ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕು. ಉಡುಪಿ -ಚಿಕ್ಕಮಗಳೂರು ಕ್ಷೇತ್ರಕ್ಕೆ ಜಯಪ್ರಕಾಶ್​ ಹೆಗ್ಡೆ ಅವರು ಅಭ್ಯರ್ಥಿಯಾಗಬೇಕು ಎಂದು ಪ್ರಾರ್ಥನೆ ಸಲ್ಲಿಸಿದ್ರು.
ಹಾಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಆಕ್ರೋಶಗೊಂಡಿರುವ ಕಾರ್ಯಕರ್ತರು ಜಯಪ್ರಕಾಶ್ ಹೆಗ್ಡೆ ಅವರಿಗೆ ಟಿಕೆಟ್​ ನೀಡಲು ಆಗ್ರಹಿಸುತ್ತಿದ್ದಾರೆ. ಹೆಗ್ಡೆ ಅವರಿಗೆ ಟಿಕೆಟ್​ ನೀಡಿದ್ರೆ ಮೋದಿ ಮತ್ತೆ ಪ್ರಧಾನಿಯಾಗಲು ಅನುಕೂಲ. ಜನರ ಜೊತೆಯಿರುವ ಜಯಪ್ರಕಾಶ್​ ಹೆಗ್ಡೆ ಅವರಿಗೇ ಟಿಕೆಟ್​ ಕೊಡಬೇಕು ಅಂತ ಹೈಕಮಾಂಡ್​ ಅನ್ನು ಕಾರ್ಯಕರ್ತರು ಆಗ್ರಹಿಸಿದ್ದಾರೆ. ಈ ಹಿಂದೆಯೂ ಗೋ ಬ್ಯಾಕ್ ಶೋಭಾ ಅಭಿಯಾನವನ್ನು ನಡೆಸಿದ್ದರು.

RELATED ARTICLES

Related Articles

TRENDING ARTICLES