Tuesday, October 15, 2024

18ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ..?

ಬೆಂಗಳೂರು: ಲೋಕಸಭಾ ಚುನಾವಣೆ ಡೇಟ್​ ಫಿಕ್ಸ್​ ಆಗ್ತಿದ್ದಂತೆಯೇ ಪಕ್ಷದ ವರಿಷ್ಠರಿಗೆ ಟಿಕೆಟ್ ಹಂಚಿಕೆ ತಲೆನೋವಾಗಿ ಪರಿಣಮಿಸಿದೆ. ದೋಸ್ತಿಯಲ್ಲಂತೂ ಟಿಕೆಟ್ ಹಂಚಿಕೆಯೇ ದೊಡ್ಡ ಸವಾಲಾಗಿ ನಿಂತಿದೆ. ಈ ನಡುವೆಯೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಡೇಟ್‌ ಫಿಕ್ಸ್‌ ಮಾಡಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಅಖಾಡಕ್ಕಿಳಿಯುವ ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್‌ 18ರಂದು ಬಿಜೆಪಿ ಬಿಡುಗಡೆ ಮಾಡಲಿದೆ. ಮಾರ್ಚ್‌ 17ರಂದು ದೆಹಲಿಯಲ್ಲಿ ಕೋರ್‌ ಕಮಿಟಿ ಸಭೆ ನಡೆಯಲಿದ್ದು, ಇಲ್ಲಿ ಟಿಕೆಟ್​ ಹಂಚಿಕೆ ಸಂಬಂಧ ಚರ್ಚೆ ನಡೆಯಲಿದೆ. ಕೋರ್​ ಕಮಿಟಿ ಸಭೆ ನಡೆದ ಮರುದಿನವೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗದಲ್ಲಿ ಸ್ಪಷ್ಟನೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES