ಬೆಂಗಳೂರು: ಲೋಕಸಭಾ ಚುನಾವಣೆ ಡೇಟ್ ಫಿಕ್ಸ್ ಆಗ್ತಿದ್ದಂತೆಯೇ ಪಕ್ಷದ ವರಿಷ್ಠರಿಗೆ ಟಿಕೆಟ್ ಹಂಚಿಕೆ ತಲೆನೋವಾಗಿ ಪರಿಣಮಿಸಿದೆ. ದೋಸ್ತಿಯಲ್ಲಂತೂ ಟಿಕೆಟ್ ಹಂಚಿಕೆಯೇ ದೊಡ್ಡ ಸವಾಲಾಗಿ ನಿಂತಿದೆ. ಈ ನಡುವೆಯೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಡೇಟ್ ಫಿಕ್ಸ್ ಮಾಡಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಅಖಾಡಕ್ಕಿಳಿಯುವ ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್ 18ರಂದು ಬಿಜೆಪಿ ಬಿಡುಗಡೆ ಮಾಡಲಿದೆ. ಮಾರ್ಚ್ 17ರಂದು ದೆಹಲಿಯಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಇಲ್ಲಿ ಟಿಕೆಟ್ ಹಂಚಿಕೆ ಸಂಬಂಧ ಚರ್ಚೆ ನಡೆಯಲಿದೆ. ಕೋರ್ ಕಮಿಟಿ ಸಭೆ ನಡೆದ ಮರುದಿನವೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗದಲ್ಲಿ ಸ್ಪಷ್ಟನೆ ನೀಡಿದ್ದಾರೆ.
18ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ..?
RELATED ARTICLES
Recent Comments
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


