ತುಮಕೂರು: ಸೀಟು ಹಂಚಿಕೆ ವಿಚಾರ ದೋಸ್ತಿಗೆ ಸವಾಲಾಗಿ ಪರಿಣಮಿಸಿದ್ದು ತುಮಕೂರು ವಾರ್ ಈಗ ದೋಸ್ತಿಗಳ ಮಧ್ಯೆ ಬಿರುಕು ಮೂಡಿಸಿದೆ. ತುಮಕೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿರೋದಕ್ಕೆ ಜಿಲ್ಲಾ ಕಾಂಗ್ರೆಸ್ ಮುಖಂಡರು ಪಕ್ಷದ ವರಿಷ್ಠರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುಮಕೂರು ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿರೋದನ್ನು ಪ್ರಶ್ನಿಸಿ ಮುದ್ದಹನುಮೇಗೌಡ ಬೆಂಬಲಿಗರು ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿ ಮಾಡಲಿದ್ದಾರೆ. ತುಮಕೂರು ಕ್ಷೇತ್ರ ಬಿಟ್ಟುಕೊಡುವ ಸಂಬಂಧ ಡಿಸಿಎಂ ಪರಮೇಶ್ವರ್ ಅವರ ಮನವಿಯನ್ನೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ತಿರಸ್ಕರಿಸಿದ್ದಾರೆ. ದೇವೇಗೌಡರ ವಿರುದ್ಧ ಮಾಜಿ ಶಾಸಕ ಕೆ.ಎನ್. ರಾಜಣ್ಣ ಬಹಿರಂಗ ಆಕ್ರೋಶ ವ್ಯಕ್ತಪಡಿಸಿದ್ದಾರೆ.