ಬೆಂಗಳೂರು : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಸ್ಪರ್ಧಿಸ್ತಾರಾ ಅನ್ನೋ ಕುತೂಹಲ ಮೂಡಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಟ್ವೀಟ್ ರಾಜ್ಯದಿಂದ ರಾಹುಲ್ ಸ್ಪರ್ಧೆ ವಿಚಾರಕ್ಕೆ ರೆಕ್ಕೆಪುಕ್ಕ ಕಟ್ಟಿದೆ. ಕಾಂಗ್ರೆಸ್ ನಾಯಕರಿಗೆ ಕರ್ನಾಟಕ ಯಾವಾಗಲೂ ಸಪೋರ್ಟ್ ಮಾಡುತ್ತೆ ಮತ್ತು ಪ್ರೋತ್ಸಾಹಿಸುತ್ತೆ. ಇದು ಇಂದಿರಾ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ವಿಚಾರದಲ್ಲಿ ಪ್ರೂವ್ ಆಗಿದೆ. ನಾವು ನಮ್ಮ ಮುಂದಿನ ಪ್ರಧಾನಿ ರಾಹುಲ್ ಗಾಂಧಿ ಅವರು ಕರ್ನಾಟಕದಿಂದ ಸ್ಪರ್ಧಿಸುವುದನ್ನು ಬಯಸ್ತೀವಿ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಅವರ ಟ್ವೀಟ್ ರಾಹುಲ್ ಕರ್ನಾಟಕದಿಂದ ಸ್ಪರ್ಧಿಸೋ ಸೂಚನೆಯನ್ನೂ ನೀಡುವಂತಿದೆ.
ಇದರ ಬೆನ್ನಲ್ಲೇ ‘ಕಳೆದ ಲೋಕಸಭಾ ಚುನಾವಣೆ ವೇಳೆಯಲ್ಲೇ ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧೆ ಮಾಡ್ಬೇಕು ಅನ್ನೋ ಒತ್ತಾಯವಿತ್ತು. ಈ ಬಾರಿಯೂ ರಾಹುಲ್ ಕರ್ನಾಟಕದಿಂದ ಸ್ಪರ್ಧಿಸ ಬೇಕೆಂಬ ಕೂಗು ಇದೆ. ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಅವರು ಕರ್ನಾಟಕದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಅದೇ ರೀತಿ ರಾಹುಲ್ ಗಾಂಧಿ ಅವರು ಸ್ಪರ್ಧೆ ಮಾಡಬೇಕು ಅನ್ನೋದು ಎರಡೂ ಪಕ್ಷಗಳ (ಕಾಂಗ್ರೆಸ್-ಜೆಡಿಎಸ್) ಒತ್ತಾಸೆ ಎಂದಿದ್ದಾರೆ.
ಇನ್ನೊಂದು ಕಡೆ ಅಮೇಥಿಯಲ್ಲಿ ಸ್ಮೃತಿ ಇರಾನಿ ಅವರ ಎದುರು ರಾಹುಲ್ ಗೆ ಸೋಲುವ ಭೀತಿ ಇದೆ. ಆದ್ದರಿಂದ ಕರ್ನಾಟಕದಿಂದ ಕಣಕ್ಕಿಳಿಯುತ್ತಾರೆ ಎನ್ನುವ ಮಾತಿದೆ. ಇನ್ನೊಂದು ಕಡೆ ಅಮೇಥಿ ಮತ್ತು ಕರ್ನಾಟಕದ ಒಂದು ಕ್ಷೇತ್ರ ಸೇರಿ ಎರಡೂ ಕಡೆ ಸ್ಪರ್ಧೆಸುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ.
ಕರ್ನಾಟಕದಿಂದ ಸ್ಪರ್ಧಿಸ್ತಾರಾ ರಾಹುಲ್ ಗಾಂಧಿ?
TRENDING ARTICLES