Sunday, December 22, 2024

ಡಿಕೆಶಿ ಅಣ್ಣನ ಸ್ಥಾನದಲ್ಲಿ ನಿಂತು ನನ್ನ ಗೆಲ್ಲಿಸ್ತಾರೆ: ಮಧು ಬಂಗಾರಪ್ಪ

ಶಿವಮೊಗ್ಗ: ಡಿ. ಕೆ. ಶಿವಕುಮಾರ್​ ಅವರು ಅಣ್ಣನ ಸ್ಥಾನದಲ್ಲಿ ನಿಂತು ನನ್ನನ್ನು ಗೆಲ್ಲಿಸ್ತಾರೆ ಅಂತ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕೇಸರಿ ಕೋಟೆಯಿಂದ ಮೈತ್ರಿ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಕುರಿತು ಮಧು ಬಂಗಾರಪ್ಪ ಅವರು ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ್ದು, “ಡಿಕೆಶಿ ಅಣ್ಣನ ಸ್ಥಾನದಲ್ಲಿ ನಿಂತು ನನ್ನನ್ನು ಗೆಲ್ಲಿಸುತ್ತಾರೆ. ಈಗಾಗಲೇ ನಾನು ಅವರ ಬಳಿ ಮಾತನಾಡಿದ್ದೇನೆ. ಶಿವಮೊಗ್ಗಕ್ಕೆ ಬರಲು ಅವರು ಒಪ್ಪಿದ್ದಾರೆ . ಡಿಕೆಶಿ ಚುನಾವಣಾ ತಂತ್ರವನ್ನು ಹೆಣೆಯಲಿದ್ದಾರೆ” ಅಂತ ಹೇಳಿದ್ದಾರೆ.

“ಇಂದಿನಿಂದ ಅಧಿಕೃತವಾಗಿ ಅಖಾಡಕ್ಕೆ ಇಳಿಯುತ್ತಿದ್ದೇನೆ. ದೇವೇಗೌಡರು ನನ್ನನ್ನು ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಿಸಲಿದ್ದಾರೆ. ಕಾಂಗ್ರೆಸ್ – ಜೆಡಿಎಸ್ ಎನ್ನದೇ,  ನನ್ನ ಗೆಲುವಿಗೆ ಎರಡೂ ಪಕ್ಷದ ಕಾರ್ಯಕರ್ತರು ಶ್ರಮ ವಹಿಸಲಿದ್ದಾರೆ. ಬಿಜೆಪಿಯವರು ಈಗ ಅಭಿವೃದ್ಧಿ ಬಗ್ಗೆ ಮಾತನಾಡುತ್ತಿಲ್ಲ. ಬಿಜೆಪಿಯವರು, ಈಗ ದೇಶವನ್ನು ಹಿಡಿದುಕೊಂಡಿದ್ದಾರೆ” ಅಂತ ಹೇಳಿದ್ದಾರೆ.

RELATED ARTICLES

Related Articles

TRENDING ARTICLES